ಕಾಣಿಯೂರು: ದೇವಸ್ಥಾನ, ರಸ್ತೆ ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ರಾಜ್ಯ ಮುಜುರಾಯಿ ಸಚಿವರಿಗೆ ಮನವಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕುಕ್ಕೇನಾಥ ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನ, ಚಾರ್ವಾಕ ಗ್ರಾಮದ ದೈಪಿಲ ಶಿರಾಡಿ ರಾಜನ್ ದೈವಸ್ಥಾನ ಹಾಗೂ ಚಾರ್ವಾಕ ಶ್ರೀ ಕಪಿಲೇಶ್ವರ ದೇವಸ್ಥಾನದ ಮೇಲ್ಛಾವಣಿ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ರಾಜ್ಯ ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಬೆಳಂದೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ, ಕಾಣಿಯೂರು ಗ್ರಾ.ಪಂ. ಉಪಾಧ್ಯಕ್ಷರಾದ ಗಣೇಶ್ ಉದನಡ್ಕರವರ ನೇತೃತ್ವದಲ್ಲಿ ಮನವಿ ಮಾಡಲಾಗಿದೆ. ಗ್ರಾ.ಪಂ. ಮಾಜಿ ಸದಸ್ಯ ವೀರಪ್ಪ ಗೌಡ ಉದ್ಲಡ್ಡ, ವಿಶ್ವನಾಥ ಖಂಡಿಗ, ಹರೀಶ್ ಕಾನಾವುಕಜೆ, ಯೋಗೀಶ್ ಮಠತ್ತಾರು ಅವರು ಮನವಿ ಸಲ್ಲಿಸುವ ಸಂದರ್ಭದಲ್ಲಿದ್ದರು.


ರಸ್ತೆ ಅಭಿವೃದ್ಧಿಗೆ ಮನವಿ: ಚಾರ್ವಾಕ – ಶ್ರೀ ಕಪಿಲೇಶ್ವರ ದೇವಸ್ಥಾನ- ಅಯೋಧ್ಯೆನಗರ ಸಂಪರ್ಕ ರಸ್ತೆ ಮತ್ತು ಬೊಬ್ಬೆಕೇರಿ – ನಾವೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಸಂಪರ್ಕ ರಸ್ತೆ ಅಭಿವೃದ್ದಿಗೆ ಅನುದಾನ ಒದಗಿಸುವಂತೆ ಮನವಿಯಲ್ಲಿ ಪ್ರಸ್ತಾಪಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.