ಸಮುದಾಯದ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ಅವಕಾಶ ಒದಗಿಸುವ ಉದ್ದೇಶ

  • ಪುತ್ತೂರಿನಲ್ಲಿ ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ಸಭೆ

ಪುತ್ತೂರು: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ಪುತ್ತೂರು ಜಿಲ್ಲಾ ವ್ಯಾಪ್ತಿಯ ಸಭೆ ಪುತ್ತೂರು ಹಿಂದೂಸ್ಥಾನ್ ಲಾಡ್ಜ್ ಸಭಾಭವನದಲ್ಲಿ ನಡೆಯಿತು.

ಸಮುದಾಯದ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ-ಇಬ್ರಾಹಿಂ ಗೋಳಿಕಟ್ಟೆ ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್‌ನ ರಾಜ್ಯ ಉಪಾಧ್ಯಕ್ಷ ಇಬ್ರಾಹಿಂ ಗೋಳಿಕಟ್ಟೆ ಮಾತನಾಡಿ ಸಮುದಾಯದಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಮತ್ತು ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವ ಸಲುವಾಗಿ ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ಹುಟ್ಟಿಕೊಂಡಿದ್ದು ನಮ್ಮಲ್ಲಿ ಈಗಾಗಲೇ 2000 ದಷ್ಟು ಮಂದಿ ಸದಸ್ಯರಿದ್ದಾರೆ, ಮುಂದಿನ ದಿನಗಳಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲೂ ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ಸಮಿತಿಯನ್ನು ರಚನೆ ಮಾಡಲಿದ್ದೇವೆ ಎಂದು ಹೇಳಿದರು.

ಅವಕಾಶಗಳ ಕೊರತೆ ನೀಗಿಸಲಿದ್ದೇವೆ-ಇಮ್ತಿಯಾಝ್
ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ರಾಜ್ಯ ಕಾರ್ಯದರ್ಶಿ ಇಮ್ತಿಯಾಝ್ ಮಾತನಾಡಿ ಕ್ರೀಡೆಯಲ್ಲಿ ನಮ್ಮ ಸಮುದಾಯದ ಕ್ರೀಡಾಪಟುಗಳು ದೊಡ್ಡ ಮಟ್ಟದಲ್ಲಿ ಹೇಳಿಕೊಳ್ಳುವಂತಹ ಸಾಧನೆ ಮಾಡಿರುವುದು ವಿರಳ, ಸೂಕ್ತ ಅವಕಾಶಗಳ ಕೊರತೆ ಇದಕ್ಕೆ ಕಾರಣವಾಗಿರಲೂಬಹುದು ಹಾಗಾಗಿ ಮುಂದಿನ ದಿನಗಳಲ್ಲಿ ಅಂತಹ ಕೊರತೆಗಳನ್ನು ನೀಗಿಸುವ ನಿಟ್ಟಿನಲ್ಲಿ ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದರು.

ಕ್ರೀಡಾ ಪ್ರತಿಭೆಗಳನ್ನು ಅರಳಿಸುವ ಪ್ರಯತ್ನ-ಸಿರಾಜುದ್ದೀನ್
ಅಧ್ಯಕ್ಷತೆ ವಹಿಸಿದ್ದ ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಸಿರಾಜುದ್ದೀನ್ ಎರ್ಮಾಲ್ ಮಾತನಾಡಿ ಸಮಾಜದಲ್ಲಿರುವ ಕ್ರೀಡಾ ಪ್ರತಿಭೆಗಳ ಸಾಧನೆಗೆ ನಮ್ಮ ಪ್ರೋತ್ಸಾಹವಿದ್ದು ಅದರಲ್ಲೂ ನಮ್ಮ ಸಮುದಾಯದ ಕ್ರೀಡಾ ಪಟುಗಳು ರಾಜ್ಯ, ರಾಷ್ಟ್ರೀಯ, ಅಂತರ್ರಾಷ್ಟ್ರೀಯ ಮಟ್ಟದಲ್ಲೂ ಸಾಧನೆ ಮಾಡುವಂತಾಗಬೇಕೆನ್ನುವುದು ನಮ್ಮ ಆಶಯ, ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ವಿನೂತನ ಯೋಜನೆ ಮೂಲಕ ಕ್ರೀಡಾ ಪ್ರತಿಭೆಗಳನ್ನು ಅರಳಿಸುವ ಪ್ರಯತ್ನವನ್ನು ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ಮೂಲಕ ನಾವು ಮಾಡಲಿದ್ದೇವೆ ಎಂದು ಹೇಳಿದರು.

ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ಪುತ್ತೂರು ಜಿಲ್ಲಾ ಸಮಿತಿ ಕಾರ್ಯದರ್ಶಿ ಮಜೀದ್ ಕೊಡಿಪ್ಪಾಡಿ ಉದ್ಘಾಟಿಸಿದರು.
ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷ ಹಮೀದ್ ಸಾಜ ಸ್ವಾಗತಿಸಿದರು. ರಝಾಕ್ ಸಾಲ್ಮರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.