ಉಪವ್ಯವಸ್ಥಾಪಕರಾಗಿ ಪದೋನ್ನತಿ ಹೊಂದಿದ ಡಾ. ಸತೀಶ್ ರಾವ್‌ರವರಿಗೆ ಮಾಡ್ನೂರು ಹಾ.ಉ.ಸಹಕಾರ ಸಂಘದಿಂದ ಅಭಿನಂದನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾವು: ಮಂಗಳೂರು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಉಪವ್ಯವಸ್ಥಾಪಕರಾಗಿ ಪದೋನ್ನತಿ ಹೊಂದಿದ ಡಾ. ಸತೀಶ್ ರಾವ್‌ರವರಿಗೆ ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದಿಂದ ಕಾವು ಕ್ಲಸ್ಟರ್ ಸಂಘಗಳ ಸಹಯೋಗದೊಂದಿಗೆ ಸನ್ಮಾನಿಸಿ ಅಭಿನಂದಿಸಲಾಯಿತು. ಡಾ. ಸತೀಶ್ ರಾವ್‌ರವರು 27 ವರ್ಷಗಳಿಂದ ದ.ಕ ಹಾಲು ಒಕ್ಕೂಟದಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಒಕ್ಕೂಟದ ಉಪವ್ಯವಸ್ಥಾಪಕರಾಗಿ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ನ.24ರಂದು ಸಂಘದ ಆವರಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು.


ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷ, ಹಾಲಿ ನಿರ್ದೇಶಕ ನನ್ಯ ಅಚ್ಚುತ ಮೂಡೆತ್ತಾಯರವರು ಡಾ. ಸತೀಶ್ ರಾವ್‌ರವರಿಗೆ ಪೇಟ ಇಟ್ಟು, ಶಾಲು ಹೊದಿಸಿ, ಹಾರ ಹಾಕಿ, ಫಲಪುಷ್ಫ, ಸ್ಮರಣಿಕೆ ನೀಡಿ ಗೌರವಿಸಿ ಅಭಿನಂದನೆ ಸಲ್ಲಿಸಿದರು. ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಕೊಚ್ಚಿರವರು ಅಧ್ಯಕ್ಷತೆ ವಹಿಸಿದ್ದರು. ಅಭಿನಂದನೆ ಸ್ವೀಕರಿಸಿದ ಡಾ.ಸತೀಶ್ ರಾವ್‌ರವರು ಕೃತಜ್ಞತೆ ಸಲ್ಲಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸುರೇಂದ್ರ ಬೋರ್ಕರ್ ನನ್ಯ, ನಿರ್ದೇಶಕ ಶ್ರೀಧರ್ ರಾವ್ ನಿಧಿಮುಂಡ, ಕಾರ್ಯದರ್ಶಿ ಬಾಲಕೃಷ್ಣ ಕೆದಿಲಾಯ, ದ.ಕ.ಹಾಲು ಒಕ್ಕೂಟದ ವಲಯ ವಿಸ್ತರಣಾಧಿಕಾರಿ ನಾಗೇಶ್, ಪಾಪೆಮಜಲು ಹಾಲು ಉ.ಸ.ಸಂಘದ ಕಾರ್ಯದರ್ಶಿ ರಮೇಶ್, ಸುಳ್ಯಪದವು ಹಾ.ಉ.ಸ.ಸಂಘದ ಕಾರ್ಯದರ್ಶಿ ವಿನಯ, ಬಡಗನ್ನೂರು ಹಾ.ಉ.ಸ.ಸಂಘದ ಕಾರ್ಯದರ್ಶಿ ಮೋಹನರವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.