ಕೂರೇಲು ಶ್ರೀ ಮಲರಾಯ ದೈವಸ್ಥಾನದಲ್ಲಿ ವೈಭವದ ನೇಮೋತ್ಸವ, ಅನ್ನಸಂತರ್ಪಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ಆರ್ಯಾಪು ಗ್ರಾಮದ ಕಾರಣಿಕ ದೈವಸ್ಥಾನವಾಗಿರುವ ಕೂರೇಲು ಶ್ರೀ ಮಲರಾಯ ದೈವಸ್ಥಾನದಲ್ಲಿ ಶ್ರೀ ಮಲರಾಯ, ಸಪರಿವಾರ ದೈವಗಳ ನೇಮೋತ್ಸವವು ನ.23 ಮತ್ತು 24ರಂದು ವೈಭವದಿಂದ ನಡೆಯಿತು. ನ.23 ರಂದು ಬೆಳಿಗ್ಗೆ ವೈಧಿಕ ಕಾರ್ಯಕ್ರಮಗಳು, ನಾಗತಂಬಿಲ, ಹರಿಸೇವೆ, ಧರ್ಮದೈವಗಳ ಕಲಾಶಭಿಷೇಕ ಮತ್ತು ತಂಬಿಲ ಸೇವೆ ನಡೆದು ಸಂಜೆ ದೈವಗಳ ಭಂಡಾರ ಇಳಿದು ಬಳಿಕ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಕಳಲ್ತಾ ಗುಳಿಗ ನೇಮೋತ್ಸವ, ಕುಟುಂಬದಲ್ಲಿ ಅಗಲಿದ ಹಿರಿಯರಿಗೆ ಪ್ರಾರ್ಥನೆ, ಬಡಿಸುವ ಕಾರ್ಯಕ್ರಮ ನಡೆಯಿತು. ಬಳಿಕ ಮಲರಾಯ ದೈವ,ಮಲರಾಯ ಬಂಟ ಮಹಿಷಾಂತಾಯ ದೈವಗಳ ನೇಮೋತ್ಸವ ಬಹಳ ವಿಜೃಂಭಣೆಯಿಂದ ನಡೆದು ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು.


ನ.24 ರಂದು ಬೆಳಿಗ್ಗೆ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ನಡೆದು ಪ್ರಸಾದ ವಿತರಣೆ ಮಧ್ಯಾಹ್ನ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ಸಂಜೆ ಕೊರತಿ, ವರ್ಣರ ಪಂಜುರ್ಲಿ, ಕುಪ್ಪೆ ಪಂಜುರ್ಲಿ ಮತ್ತು ಕಲ್ಲುರ್ಟಿ ದೈವಗಳ ಭಂಡಾರ ಇಳಿದು ಬಳಿಕ ಕೊರತ್ತಿ ದೈವದ ನೇಮೋತ್ಸವ ವಿಜೃಂಭಣೆಯಿಂದ ಜರಗಿತು. ಬಳಿಕ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಿತು. ರಾತ್ರಿ ವರ್ಣರ ಪಂಜುರ್ಲಿ, ಕುಪ್ಪೆ ಪಂಜುರ್ಲಿ ಮತ್ತು ಕಲ್ಲುರ್ಟಿ ದೈವಗಳ ನೇಮೋತ್ಸವ ನಡೆದು ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು. ಈ ದೈವ ಕಾರ್ಯದಲ್ಲಿ ಕೂರೇಲು ಕುಟುಂಬಸ್ಥರು, ಊರಪರವೂರ ಭಕ್ತಾಧಿಗಳು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು. ಶ್ರೀ ಕೂರೇಲು ಮಲರಾಯ ದೈವಸ್ಥಾನದ ಆಡಳಿತ ಮುಖ್ಯಸ್ಥ ಕೂರೇಲು ಸಂಜೀವ ಪೂಜಾರಿಯವರು ಭಕ್ತಾಧಿಗಳನ್ನು ಸ್ವಾಗತಿಸಿ, ಪ್ರಸಾದ ನೀಡಿ ಸತ್ಕರಿಸಿದರು. ಕೂರೇಲು ಹರ್ಷಿತ್ ಕುಮಾರ್, ಸರಸ್ವತಿ ಸಂಜೀವ ಪೂಜಾರಿ ಹಾಗೂ ಕೂರೇಲು ಕುಟುಂಬಸ್ಥರು ಸಹಕರಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.