ನ.28: ವರ್ತಕರ ಸಂಘದ ಆಶ್ರಯದಲ್ಲಿ ಕುಂಬ್ರದಲ್ಲಿ ಬೃಹತ್ ರಕ್ತದಾನ ಶಿಬಿರ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ವರ್ತಕರ ಸಂಘ ಕುಂಬ್ರ ಇದರ ಆಶ್ರಯದಲ್ಲಿ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ನ.೨೮ ರಂದು ಬೆಳಿಗ್ಗೆ ಕುಂಬ್ರ ನವೋದಯ ರೈತ ಸಭಾ ಭವನದಲ್ಲಿ ನಡೆಯಲಿದೆ. ಶಿಬಿರವನ್ನು ಪುತ್ತೂರು ಗ್ರಾಮಾಂತರ ಠಾಣಾ ಎಸ್.ಐ. ಉದಯರವಿ ಎಮ್.ವೈ ಉದ್ಘಾಟಿಸಲಿದ್ದಾರೆ. ವರ್ತಕ ಸಂಘದ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ ಸಭಾಧ್ಯಕ್ಷತೆ ವಹಿಸಲಿದ್ದು, ಅತಿಥಿಗಳಾಗಿ ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಮಾತೃಶ್ರೀ ಅರ್ಥ್‌ಮೂವರ್‍ಸ್ ಮಾಲಕ, ಉದ್ಯಮಿ ಮೋಹನ್‌ದಾಸ್ ರೈ ಕುಂಬ್ರ, ಬ್ಲಡ್ ಹೆಲ್ಪ್‌ಲೈನ್ ಕಾರ್ನಟಕ ಇದರ ಕಾರ್ಯ ನಿರ್ವಾಹಕ ರಿಯಾಝ್ ಕಣ್ಣೂರ್, ಆಕರ್ಷಣ್ ಇಂಡಸ್ಟ್ರೀಸ್ ಮಾಲಕ ಕೆ.ಪಿ.ಮಹಮ್ಮದ್ ಸಾದಿಕ್, ವರ್ತಕ ಸಂಘದ ಗೌರವ ಸಲಹೆಗಾರರಾದ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕ, ಚಂದ್ರಕಾಂತ ಶಾಂತಿವನ,ಕುಂಬ್ರ ದುರ್ಗಾಪ್ರಸಾದ್ ರೈ ಭಾಗವಹಿಸಲಿದ್ದಾರೆ. ಸ್ಥಾಪಕ ಅಧ್ಯಕ್ಷ ಶ್ಯಾಮ್‌ಸುಂದರ್ ರೈ ಕೊಪ್ಪಳ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

ಆಮಂತ್ರಣ ಪತ್ರಿಕೆ ಬಿಡುಗಡೆ
ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ನ.೨೪ ರಂದು ಕುಂಬ್ರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ವರ್ತಕರ ಸಂಘದ ಸ್ಥಾಪಕ ಅಧ್ಯಕ್ಷ ಶ್ಯಾಮ್‌ಸುಂದರ್ ರೈ ಕೊಪ್ಪಳ, ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರ, ಪ್ರ.ಕಾರ್ಯದರ್ಶಿ ಅಝರ್ ಷಾ ಕುಂಬ್ರ, ಮಾಜಿ ಅಧ್ಯಕ್ಷರುಗಳಾದ ಮೆಲ್ವಿನ್ ಮೊಂತೆರೋ, ದಿವಾಕರ ಶೆಟ್ಟಿ, ಸದಸ್ಯರಾದ ಉದಯ ಆಚಾರ್ಯ ಕೃಷ್ಣನಗರ, ಭವ್ಯ ರೈ, ಶುತಿಚಂದ್ರ, ನಿತಿಶ್ ಕುಮಾರ್ ಶಾಂತಿವನ, ಪದ್ಮನಾಭ ಆಚಾರ್ಯ, ಎಸ್.ಎ ಆಲಿ, ಸೂರಜ್ ಮತ್ತಿತರರು ಉಪಸ್ಥಿತರಿದ್ದರು. ಕೋವಿಡ್ ವ್ಯಾಕ್ಸಿನ್ ಎರಡು ಡೋಸ್ ಪಡಕೊಂಡವರು 14 ದಿನದ ನಂತರ ರಕ್ತದಾನ ಮಾಡಲು ಅರ್ಹರಾಗಿದ್ದು, ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಳ್ಳಲಾಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.