ಕೊಂಬೆಟ್ಟು ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಅರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡದಿದ್ದರೆ ‘ಪುತ್ತೂರು ಚಲೋ ಪ್ರತಿಭಟನೆ’ – ಸಿಎಫ್‌ಐ ಎಚ್ಚರಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ ಒಂದು ವಾರಗಳಿಂದ ನಡೆಯುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲಿನ ಹಲ್ಲೆ ನಡೆಸಿದವರನ್ನು ಬಂಧಿಸಿ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡದಿದ್ದರೆ ಜಿಲ್ಲೆಯಲ್ಲಿರುವ ಎಲ್ಲಾ ವಿದ್ಯಾರ್ಥಿಗಳು ಸೇರಿಕೊಂಡು ‘ಪುತ್ತೂರು ಚಲೋ ಪ್ರತಿಭಟನೆ’ ಮಾಡಲಿದ್ದೇವೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೀಶ್ ಕುಂಬ್ರ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.


ಸಂಘ ಪರಿವಾರದ ನಾಯಕರಾದ ಅರುಣ್ ಕುಮಾರ್ ಪುತ್ತಿಲ, ಚಿನ್ಮಯ ಈಶ್ವರಮಂಗಲ ಹಲ್ಲೆ ಪ್ರಕರಣಕ್ಕೆ ಹೊಣೆಯಾಗಿದ್ದಾರೆ. ವಿದ್ಯಾರ್ಥಿಗಳ ಪುಂಡರನ್ನು ಮತ್ತು ಪ್ರಚೋದನೆ ನೀಡಿದ ಸಂಘಪರಿವಾರದ ನಾಯಕರನ್ನು ಶೀಘ್ರ ಬಂದಿಸುವಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಆಗ್ರಹಿಸುತ್ತದೆ ಎಂದ ಅವರು ಸಂಘ ಪರಿವಾರದ ಮುಖಂಡರು ಕಾಲೇಜುಗಳಿಗೆ ತೆರಳಿ ಹಿಂದು ಹುಡುಗಿಯರ ರಕ್ಷಣೆ, ಲವ್ ಜಿಹಾದ್ ಮುಂತಾದ ಮತೀಯ ವಿಚಾರಗಳ ಬಗ್ಗೆ ಮುಸ್ಲಿಂ ವಿದ್ಯಾರ್ಥಿಗಳ ಮೆಲೆ ನಿಗಾ ವಹಿಸುವಂತೆ ಮತ್ತು ಯಾರಾದರೂ ಹಿಂದು ಹುಡುಗಿಯರ ಬಳಿ ಮಾತನಾಡಿದರೆ ಹಲ್ಲೆ ಮಾಡುವಂತೆ ಪ್ರಚೋದಿಸಿದ್ದಾರೆ. ಕಳೆದ ವಾರ ದೇವಳದ ನಟರಾಜ ವೇದಿಕೆಯಲ್ಲಿ ಹಿಂದೂ ವಿದ್ಯಾರ್ಥಿಗಳನ್ನು ಕರೆಸಿ ಕಾರ್ಯಕ್ರಮ ನಡೆಸುವ ಮೂಲಕ ಕೋಮು ವಿಷ ಬೀಜ ಬಿತ್ತುದಿದ್ದಾರೆ. ಇದರಿಂದ ಪ್ರಚೋದನೆಗೆ ಕೊಂಬೆಟ್ಟು ಕಾಲೇಜಿನಲ್ಲಿ ನಾಲ್ಕು ಹಲ್ಲೆ ಪ್ರಕರಣ ನಡೆದಿದೆ. ಮೂರನೆ ಬಾರಿಯ ಹಲ್ಲೆಗೆ ವಿದ್ಯಾರ್ಥಿಗಳಿಗೆ ತ್ರಿಶೂಲದಲ್ಲಿ ಹಲ್ಲೆ ಮಾಡಲಾಗಿದೆ. ಈ ಕುರಿತು ಕಾಲೇಜಿಗೆ ನಿಯೋಗ ತೆರಳಿ ಹಲ್ಲೆ ಮಾಡಿದ ಎಬಿವಿಪಿ ಪುಂಡರನ್ನು ಅಮಾನತು ಮಾಡುವಂತೆ ಕೋರಲಾಗಿತ್ತು. ಇದನ್ನರಿತ ಸಂಘಪರಿವಾರವು ಹಿಂದು ವಿದ್ಯಾರ್ಥಿಗಳಿಗೆ ಹಲ್ಲೆ ಯತ್ನವಾಗಿದೆ ಎಂದು ಗಾಳಿ ಸುದ್ದಿ ಹರಡಿ ಬುಧವಾರದಂದು ಎಬಿವಿಪಿ ನೇತೃತ್ವದಲ್ಲಿ ಕಾಲ್ನಡಿಗೆ ಜಾಥಾ ಮಾಡಿ ಕಾಲೇಜಿನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಈ ಪ್ರತಿಭಟನೆಯಲ್ಲಿ ಸಂಘಪರಿವಾರದ ಹೊರಗಿನ ಕಾರ್ಯಕರ್ತರು ಸೇರಿಕೊಂಡು ಅಲ್ಲಿ ಸೈಪುದ್ದೀನ್, ಇಮ್ರಾನ್, ತೌಸೀಪ್ ಎಂಬ ವಿದ್ಯಾರ್ಥಿಗಳಿಗೆ ತ್ರಿಶೂಲದಿಂದ ಹಲ್ಲೆ ಮಾಡಿದ್ದಾರೆ. ಒಟ್ಟಾರೆಯಾಗಿ ಘಟನೆಯಲ್ಲಿ ಸಂಘಪರಿವಾರವು ವಿದ್ಯಾರ್ಥಿಗಳನ್ನು ಬಳಸಿಕೊಂಡು ಅವರ ಕೈಗೆ ಆಯುಧಗಳನ್ನು ನೀಡಿ ಕೋಮುಗಲಭೆಗೆ ಪ್ರಚೋದಿಸುತ್ತದೆ. ಇವೆಲ್ಲ ನಡೆದರೂ ಪೊಲೀಸ್ ಇಲಾಖೆ ಮೌನವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಘಟನೆಗಳ ಕುರಿತು ಸೂಕ್ತ ತನಿಖೆ ನಡೆಸಲು ಇಲಾಖೆಯು ಉನ್ನತ ಅಧಿಕಾರಿಗಳನ್ನು ನೇಮಿಸಬೇಕು ಎಂದು ಆಗ್ರಹಿಸುತ್ತದೆ. ಮತ್ತು ಘಟನೆ ಇಲ್ಲಿಗೆ ಶಾಂತಿಯುತವಾಗಿ ಮುಕ್ತಾಯವಾಗಬೇಕು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಪುತ್ತೂರು ಚಲೋ ಪ್ರತಿಭಟನೆ ಹಮ್ಮಿಕೊಳ್ಳಬೇಕಾದಿತು ಎಂದು ಅವರು ಹೇಳಿದರು.

ಪೊಲೀಸರಿಗೆ ಮುನ್ಸೂಚನೆ ನೀಡಿದರೂ ನಿರ್ಲಕ್ಷ್ಯ
ಮೊದಲ ಮಾರಿ ಯುವಕಗೆ ಹಲ್ಲೆಯಾದಾಗ ನಾವು ಪೊಲೀಸರಿಗೆ ಕಾಲೇಜ್‌ನಲ್ಲಿ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಯುವ ಅಪಾಯಗಳ ಬಗ್ಗೆ ತಿಳಿಸಿದ್ದೆವು. ಈ ಸಂದರ್ಭದಲ್ಲಿ ಪೊಲೀಸರು ರಕ್ಷಣೆ ನೀಡುವುದಾಗಿ ತಿಳಿಸಿದ್ದರು. ಅಲ್ಪ ಸಂಖ್ಯಾತ ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಭವರಸೆ ನೀಡಿದ್ದರು. ಆದರೂ ಅನಾಹುತ ನಡೆದಿದೆ. ಕೊಠಡಿಗೆ ತ್ರಿಶೂಲ ಮತ್ತು ಮಾರಕ ಆಸ್ತ್ರಗಳನ್ನು ತರುವುದು ಹಲ್ಲೆ ನಡೆಸುವುದು ಮಾಡುತ್ತಿದ್ದಾರೆ. ಕಾಲೇಜಿನಲ್ಲಿ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ರಕ್ಷಣೆ ಮತ್ತು ಅಲ್ಲಿ ಘಟನೆ ನಡೆಸುವ ಸಾಧ್ಯತೆ ಇದೆ ಎಂದು ಪೊಲೀಸರಿಗೆ ಒಂದು ಗಂಟೆಗೂ ಮೊದಲು ಮಾಹಿತಿ ನೀಡಿದರೂ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾ ಮುಖಂಡ ರಿಯಾಝ್ ಅಂಕತ್ತಡ್ಕ, ಜಿಲ್ಲಾ ಕಾರ್ಯದರ್ಶಿ ಮುಸ್ತಫಾ ಕೊಡಿಪ್ಪಾಡಿ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.