ಶೈಕ್ಷಣಿಕ ಶಿಸ್ತನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು – ಕೊಂಬೆಟ್ಟು ಕಾಲೇಜು ಉಪನ್ಯಾಸಕರ, ಅಭಿವೃದ್ಧಿ ಸಮಿತಿಗೆ ಶಾಸಕ ಸಂಜೀವ ಮಠಂದೂರು ಸೂಚನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನೂರು ವರ್ಷ ಇತಿಹಾಸ ಇರುವ ಶಿಕ್ಷಣ ಸಂಸ್ಥೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಆಗಬಾರದು. ಮಕ್ಕಳು ಶಿಸ್ತಿನಲ್ಲಿ ಇರಬೇಕು. ನೈತಿಕತೆಯನ್ನು ಮೈಗೂಡಿಸಲು ಕಾಲೇಜು ಅಭಿವೃದ್ಧಿ ಸಮಿತಿ, ಪ್ರಾಂಶುಪಾಲರು, ಉಪನ್ಯಾಸಕರು ಸೇರಿಸಿಕೊಂಡು ಶೈಕ್ಷಣಿಕ ಶಿಸ್ತನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಶಾಸಕ ಸಂಜೀವ ಮಠಂದೂರು ಸೂಚನೆ ನೀಡಿದ್ದಾರೆ.


ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹಲ್ಲೆ ಪ್ರಕರಣ ಘಟನೆಗಳ ಕುರಿತು ತಾನೆ ಕುದ್ದು ನ.26ರಂದು ಕಾಲೇಜಿಗೆ ತೆರಳಿ ಎಸ್‌ಡಿಎಂಸಿ, ಅಭಿವೃದ್ಧಿ ಸಮಿತಿ ಸಭೆಯನ್ನು ನಡೆಸಿ ಘಟನೆಯ ಕುರಿತಂತೆ ವಿವರಗಳನ್ನು ಪಡೆದುಕೊಂಡರು. ಯಾವ ಮಕ್ಕಳು ಅಶಿಸ್ತಿನಿಂದ ವರ್ತಿಸುತ್ತಾರೋ ಅಂತವರ ಮಕ್ಕಳ ಹೆತ್ತವರ ಗಮನಕ್ಕೆ ತಂದು ಮನವರಿಕೆ ಮಾಡುವ ಕೆಲಸ ಆಗಬೇಕು. ಶೈಕ್ಷಣಿಕ ಶಿಸ್ತನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಶಿಕ್ಷಣ ಸಂಸ್ಥೆಯ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದಲ್ಲಿ ಉತ್ತಮ ಫಲಿತಾಂಶ ಬರುವಂತೆ ಪ್ರಯತ್ನಿಸಬೇಕೆಂದು ಪ್ರಾಂಶುಪಾಲರಿಗೆ ಮತ್ತು ಉಪನ್ಯಾಸಕರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಪ್ರಾಂಶಪಾಲ ಸುರೇಶ್ ಮತ್ತು ಉಪನ್ಯಾಸಕರು, ಎಸ್‌ಡಿಎಂಸಿ ಸದಸ್ಯರು ಉಪಸ್ಥಿತಿರಿದ್ದರು.

ಪ್ರತಿ ತಿಂಗಳು ಮಕ್ಕಳ ಸಭೆ:
ಸಭೆಯ ಬಳಿಕ ಪತ್ರಿಕಾ ಮಾದ್ಯಮದೊಂದಿಗೆ ಮಾತನಾಡಿದ ಶಾಸಕರು ಇವತ್ತು ಕಾಲೇಜಿನಲ್ಲಿ ಕಟ್ಟು ನಿಟ್ಟಿನಿ ಶಿಸ್ತನ್ನು ಕಾಪಾಡುವಂತೆ ಇವತ್ತು ಉಪನ್ಯಾಸಕರು, ಸಮಿತಿ ಸದಸ್ಯರ ಸಭೆ ಮಾಡಿದ್ದೇನೆ. ಪ್ರತೀ ತಿಂಗಳು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಮಾಡುವ ಮೂಲಕ ಅವರು ಶೈಕ್ಷಣಿಕ ಚಟುವಟಿಕೆಗಳಲ್ಲಿ ಹೆಚ್ಚಿನ ಗಮನ ಹರಿಸುವಂತೆ ಕ್ರಮಕೈಗೊಳ್ಳಲಾಗುವುದು. ಬೆಳಿಗ್ಗೆ ಸಂಜೆ ಕಾಲೇಜಿನ ಆವರಣದಲ್ಲಿ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಗಮನ ಕೊಡಬೇಕು. ಹೆತ್ತವರ ಸಭೆ ಮಾಡಬೇಕು. ವಿದ್ಯಾರ್ಥಿಗಳ ವಿಚಾರವನ್ನು ಹೆತ್ತವರಿಗೆ ತಿಳಿಸಬೇಕು. ವಿದ್ಯಾರ್ಥಿನಿಯರಿಗೂ ಪ್ರತ್ಯೇಕ ಕೌನ್ಸಿಲಿಂಗ್ ಮಾಡುವ ಅಗತ್ಯವಿದೆ. ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವ ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ವಿಭಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಲು ಹಾಗೂ ಸಂಸ್ಥೆಯ ಅಭಿವೃದ್ಧಿಗಾಗಿ ಸರಕಾರದಿಂದ ಹೆಚ್ಚಿನ ಅನುದಾನವನ್ನು ಮಂಜೂರುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.