ಮೈಸೂರಿನ ಫೊಟೋಗ್ರಾಫರ್ ಜಗದೀಶ್ ಕೊಲೆ ಪ್ರಕರಣ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  •  ಕೃತ್ಯಕ್ಕೆ ಒಳಸಂಚು ಆರೋಪ-ಅಣಿಲೆ ಜಯರಾಜ್ ಶೆಟ್ಟಿ ಬಂಧನ

ಪುತ್ತೂರು: ಪುತ್ತೂರಿಗೆ ಬಂದು ನಾಪತ್ತೆಯಾಗಿದ್ದ ಮೈಸೂರಿನ ಫೊಟೋಗ್ರಾಫರ್ ಜಗದೀಶ್ ಅವರನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದು, ಶವವನ್ನು ಕಾಡು ಪ್ರದೇಶದಲ್ಲಿ ಗುಂಡಿ ತೋಡಿ ಹೂತಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಈ ಹಿಂದೆ ತಿಂಗಳಾಡಿ ಉಮೇಶ್ ರೈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಬಳಿಕ ನ್ಯಾಯಾಲಯದಲ್ಲಿ ದೋಷಮುಕ್ತಗೊಂಡಿದ್ದ    ಬಡಗನ್ನೂರು ಗ್ರಾಮದ    ಅಣಿಲೆ ಜಯರಾಜ್ ಶೆಟ್ಟಿ (48ವ) ಎಂಬವರನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿದ್ದಾರೆ.ಕೃತ್ಯಕ್ಕೆ ಒಳಸಂಚು ನಡೆಸಿದ್ದ ಆರೋಪದಲ್ಲಿ ಈತನನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯ ಸುಬ್ರಹ್ಮಣ್ಯ ನಗರ ನಿವಾಸಿಯಾಗಿದ್ದ,ಮಂಗಳೂರು ತಾಲೂಕು ಕಾವೂರು ಗ್ರಾಮದ ಶಿವನಗರ ಮುಲ್ಲಕಾಡು ಸಿಂಧೂರ ಮನೆ ದಿ.ಶಂಭು ಶೆಟ್ಟಿಯವರ ಮಗ ಜಗದೀಶ್ (58ವ.) ಅವರನ್ನು ಕೊಲೆ ಮಾಡಿದ್ದ ಆರೋಪದಲ್ಲಿ ಈಗಾಗಲೇ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು ಜಯರಾಜ್ ಬಂಧನದೊಂದಿಗೆ ಬಂಧಿತರ ಸಂಖ್ಯೆ ಐದಕ್ಕೇರಿದೆ.ಮೃತ ಜಗದೀಶ್ ಅವರಿಗೆ ಸಂಬಂಧದಲ್ಲಿ ಮಾವ ಆಗಿರುವ, ನೆಟ್ಟಣಿಗೆಮುಡ್ನೂರು ಗ್ರಾಮದ ಪಟ್ಲಡ್ಕ ಬಾಲಕೃಷ್ಣ ರೈ ಯಾನೆ ಸುಬ್ಬಯ್ಯ ರೈ, ಆತನ ಪತ್ನಿ ಜಯಲಕ್ಷ್ಮೀ ರೈ, ಮಗ ಪ್ರಶಾಂತ್ ರೈ ಮತ್ತು ಹತ್ತಿರದ ಮನೆಯ ಸಂಜೀವ ಗೌಡ ಪಟ್ಲಡ್ಕ ಅವರ ಮಗ ಜೀವನ್‌ಪ್ರಸಾದ್ ಅವರನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲೇ ಪೊಲೀಸರು ಬಂಧಿಸಿದ್ದು ಜಯಲಕ್ಷ್ಮೀ ರೈಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಉಳಿದ ಮೂವರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳ ವಿಚಾರಣೆ ವೇಳೆ, ಕೃತ್ಯಕ್ಕೆ ಒಳಸಂಚು ರೂಪಿಸಿರುವುದು ಜಯರಾಜ್ ಶೆಟ್ಟಿ ಎಂಬ ಮಾಹಿತಿಯನ್ನು ಪಡೆದುಕೊಂಡಿರುವ ಪೊಲೀಸರು ಈತನನ್ನು ಬಂಧಿಸಿದ್ದಾರೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.