ನ.29: ಕುಂಬ್ರ ಎಬ್ರೋಡ್ ಹೊರಾಂಗಣದಲ್ಲಿ ನೂರೇ ಅಜ್ಮೀರ್ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಪುತ್ತೂರು ತಾಲೂಕಿನಲ್ಲೇ ಪ್ರಥಮ ಬಾರಿಗೆ ಬೃಹತ್ ಆಧ್ಯಾತ್ಮಿಕ ಮಜ್ಲಿಸ್

ಪುತ್ತೂರು: ಕರ್ನಾಟಕ ಇಸ್ಲಾಮಿಕ್ ಸೆಂಟರ್ ಕುಂಬ್ರ ಇದರ ಆಶ್ರಯದಲ್ಲಿ ಕುಂಬ್ರ ಎಬ್ರೋಡ್ ಹೊರಾಂಗಣದಲ್ಲಿ ನೂರೇ ಅಜ್ಮೀರ್ ಬೃಹತ್ ಆಧ್ಯಾತ್ಮಿಕ ಮಜ್ಲಿಸ್ ಕಾರ್ಯಕ್ರಮ ನ.29ರಂದು ನಡೆಯಲಿದ್ದು , ಪುತ್ತೂರು ತಾಲೂಕಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಈ ರೀತಿಯ ಬೃಹತ್ ಮಜ್ಲಿಸ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಎಬ್ರೋಡ್ ಸಭಾಂಗಣದ ಹೊರಾಂಗಣದಲ್ಲಿ ಕಾರ್ಯಕ್ರಮದ ವ್ಯವಸ್ಥೆಯನ್ನು ಮಾಡಲಾಗಿದೆ. ಹಾಲ್‌ನ ಒಳಗಡೆ ಮತ್ತು ಹೊರಗಡೆ ಎರಡೂ ಕಡೆಯಲ್ಲೂ ಮಜ್ಲಿಸ್ ವ್ಯವಸ್ಥೆ ಮಾಡಲಾಗಿದೆ. ಪ್ರಥಮ ಬಾರಿಗೆ ಎಂಬಂತೆ ಮಹಿಳೆಯರಿಗೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿದೆ.

 

ನೂರೇ ಅಜ್ಮೀರ್ ಮಜ್ಲಿಸ್ ಮೂಲಕ ಜಗತ್ಪ್ರಸಿದ್ದಿ ಪಡೆದ ಖ್ಯಾತ ಸುನ್ನಿ ವಿದ್ವಾಂಸ ವಲಿಯುದ್ದೀನ್ ರ್ಫಐಝಿ ವಾಝಕ್ಕಾಡ್ ಮಜ್ಲಿಸ್ ನೇತೃತ್ವ ವಹಿಸಲಿದ್ದಾರೆ.

 

ಕಾರ್ಯಕ್ರಮವನ್ನು ಸಯ್ಯದ್ ಅಲೀ ತಂಙಳ್ ಕುಂಬೋಲ್ ಉದ್ಘಾಟನೆ ಮಾಡಲಿದ್ದಾರೆ. ಕುಂಬ್ರ ಕೆಐಸಿ ವಿದ್ಯಾ ಸಂಶ್ಥೆಯ ಅಧ್ಯಕ್ಷ ಕೆ ಪಿ ಅಹ್ಮದ್ ಹಾಜಿ ಆಕರ್ಷಣ್ ಅಧ್ಯಕ್ಷತೆ ವಹಿಸಲಿದ್ದು, ಸಮಸ್ತ ಕೇಂದ್ರ ಮುಶಾವರದ ಸದಸ್ಯರಾದ ಬಿ ಕೆ ಅಬ್ದುಲ್ ಖಾದರ್ ಮುಸ್ಲಿಯಾರ್ ಬಂಬ್ರಾಣ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.

 

ಮಗ್ರಿಬ್ ನಮಾಜಿನ ಬಳಿಕ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ.ಸಂಜೆ ಐದರಿಂದ ಕುರ್‌ಆನ್ ಪಾರಾಯಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದ್ದು ಆ ಬಳಿಕ ಮಜ್ಲಿಸ್ ಹಂತ ಹಂತವಾಗಿ ಪ್ರಾರಂಭಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸಾದತ್‌ಗಳು, ಉಲಮಾಗಳು, ಮುತಅಲ್ಲಿಮರು, ಹಾಫಿಝ್‌ಗಳು, ಉಮರಾಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಕೊನೇಯಲ್ಲಿ ಖ್ವಾಜಾ ತಂಙಳರ ಹೆಸರಿನಲ್ಲಿ ತಬರ್ರುಕ್ ವಿತರಣೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಮಂದಿಗೆ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದ್ದು ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ ಇರುವ ಕಾರಣಕ್ಕೆ ಸೂಕ್ತ ಬಂದೋ ಬಸ್ತ್‌ಗಾಗಿ ಸ್ವಯಂ ಸೇವಕರನ್ನು ನೇಮಕ ಮಾಡಲಾಗಿದೆ ಎಂದು ಸಂಶ್ಥೆಯ ಪ್ರಕಟನೆ ತಿಳಿಸಿದೆ.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.