ಉಪ್ಪಿನಂಗಡಿ-ಮಠದಲ್ಲಿ ಆಟೋರಿಕ್ಷಾಗೆ ಲಾರಿ ಡಿಕ್ಕಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿದ್ಯಾರ್ಥಿ ಅಲ್ತಾಫ್ ಮೃತ್ಯು, 3 ಮಂದಿಗೆ ಗಾಯ

೦ ಲಾರಿಯಾತ ಓವರ್‌ಟೇಕ್ ಮಾಡುವ ಭರಾಟೆಯಲ್ಲಿ ನಡೆದ ಅವಘಡ

೦ ಸಂಪೂರ್ಣ ನುಜ್ಜುಗುಜ್ಜಾದ ಆಟೋ ರಿಕ್ಷಾ.

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರಲ್ಲಿ, ಮಠ ಎಂಬಲ್ಲಿ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ, ಆಟೋ ರಿಕ್ಷಾದಲ್ಲಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟು, ರಿಕ್ಷಾ ಚಾಲಕ ಸಹಿತ 3 ಮಂದಿ ಗಂಭೀರ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಉಪ್ಪಿನಂಗಡಿ : ಅಟೋರಿಕ್ಷಾವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಟೋದಲ್ಲಿದ್ದ ಮಗು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿ ಮಠ ಎಂಬಲ್ಲಿ ನ.29ರಂದು ಸಂಜೆ ನಡೆದಿದೆ. ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿಯ ಮಠ ಎಂಬಲ್ಲಿ ಘಟನೆ ನಡೆದಿದ್ದು ಅಪಘಾತದಿಂದ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ ಎಂದು ತಿಳಿದು ಬಂದಿದೆ.

 ಆಟೋರಿಕ್ಷಾದಲ್ಲಿದ್ದು ಮೃತಪಟ್ಟಿರುವ ಬಾಲಕ ಹಿರ್ತಡ್ಕ ನಿವಾಸಿ ದಿವಂಗತ ಅಶ್ರಫ್ ಎಂಬವರ ಪುತ್ರ, ಹಿರ್ತಡ್ಕ ಸರ್ಕಾರಿ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಅಲ್ತಾಫ್ (12 ವ.) ಎಂಬವನಾಗಿರುತ್ತಾನೆ. ರಿಕ್ಷಾದಲ್ಲಿದ್ದ ಈತನ ತಾಯಿ ಖತೀಜಮ್ಮ, ಅಣ್ಣ ಆಶಿಕ್ ಮತ್ತು ಆಟೋ ರಿಕ್ಷಾ ಚಾಲಕ ಹಿರ್ತಡ್ಕ ನಿವಾಸಿ ಸಿದ್ದಿಕ್ ಗಂಭೀರ ಸ್ವರೂಪದ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತ ಅಲ್ತಾಫ್‌ನ ತಾಯಿ ಖತೀಜಮ್ಮ ಮಂಗಳೂರು ಬೆಂಗರೆ ನಿವಾಸಿ ಆಗಿದ್ದು, ಇವರು ತನ್ನ ಮಕ್ಕಳೊಂದಿಗೆ ತವರು ಮನೆಗೆ ಹೋಗಿದ್ದವರು ಬಸ್ಸಿನಲ್ಲಿ ಬಂದು ಉಪ್ಪಿನಂಗಡಿಯಲ್ಲಿ ಬಸ್‌ನಿಂದ ಇಳಿದು ಆಟೋರಿಕ್ಷಾದಲ್ಲಿ ಮನೆಗೆ ಹೋಗುತ್ತಿದ್ದರೆನ್ನಲಾಗಿದೆ. ಮೃತ ಅಲ್ತಾಫ್ ತಂದೆ ೨ ವರ್ಷದ ಹಿಂದೆ ಮೃತಪಟ್ಟಿರುತ್ತಾರೆ.

                                                             ಮೃತ ಅಲ್ತಾಫ್‌

ಈ ಮೂವರನ್ನು ಕುಳ್ಳಿರಿಸಿಕೊಂಡು ಆಟೋ ರಿಕ್ಷಾ ಉಪ್ಪಿನಂಗಡಿಯಿಂದ ಹಿರ್ತಡ್ಕ ಕಡೆಗೆ ಹೋಗುತ್ತಿದ್ದಾಗ ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬರುತ್ತಿದ್ದ ಲಾರಿ ಇನ್ನೊಂದು ವಾಹನವನ್ನು ಹಿಂದಿಕ್ಕುವ ಯತ್ನದಲ್ಲಿ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದ್ದು, ಆಟೋ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಡಿವೈಎಸ್ಪಿ. ಗಾನಾ ಪಿ. ಕುಮಾರ್, ಸಂಚಾರಿ ಸಬ್ ಇನ್ಸ್‌ಪೆಕ್ಟರ್ ರಾಮ ನಾಯ್ಕ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.