ಸವಣೂರು : ನಾಪತ್ತೆಯಾದ ವ್ಯಕ್ತಿಯ ಶವ ನೀರಿನ ತೊಟ್ಟಿಯಲ್ಲಿ ಪತ್ತೆ | ಆತ್ಮಹತ್ಯೆ ಶಂಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಸವಣೂರು :ಪೇಟೆಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟವರನ್ನು ಸವಣೂರು ಗ್ರಾಮದ ಉರುಸಾಗು ನಿವಾಸಿ ರಾಮಯ್ಯ ಪೂಜಾರಿ ಎಂದು ಗುರುತಿಸಲಾಗಿದೆ.

 

ರಾಮಯ್ಯ ಪೂಜಾರಿ ಅವರು ಎರಡು ದಿನಗಳ ಹಿಂದೆ ಸವಣೂರು ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮತ್ತೆ ಮನೆಗೆ ಹಿಂತಿರುಗಿ ಬಾರದೇ ಇದ್ದು, ಮನೆಯವರು ಎಲ್ಲಾ ಕಡೆ ಹುಡುಕಾಟ ನಡೆಸುತ್ತಿದ್ದಾಗ ಸಮೀಪದ ಅತ್ತಿಕೆರೆ ನಿವಾಸಿ ಸುಬ್ರಹ್ಮಣ್ಯ ರಾವ್‌.ಕೆ.ಎಂಬವರ ಗುಡ್ಡದಲ್ಲಿರುವ ಕೃಷಿಗೆ ಉಪಯೋಗಿಸುವ ನೀರಿನ ಟ್ಯಾಂಕಿಯಲ್ಲಿ ಶವ ಪತ್ತೆಯಾಗಿದೆ. ಅವರು ಟ್ಯಾಂಕಿಗರ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಎನ್ನಲಾಗಿದೆ.

ರಾಮಯ್ಯ ಪೂಜಾರಿ ಅವರು ವಿಪರೀತ ಮಧ್ಯವನ್ನು ಸೇವಿಸುವ ಚಟವನ್ನು ಹೊಂದಿದ್ದು ,ಸರಿಯಾಗಿ ಎಲ್ಲಿಗೂ ಕೆಲಸಕ್ಕೂ ಹೋಗದೇ ಮತ್ತು ಆಹಾರವನ್ನು ಸೇವಿಸದೇ ಇದ್ದು, ಮಾನಸಿಕ ಖಿನ್ನತೆಗೆ ಒಳಗಾಗಿ ಜೀವನದಲ್ಲಿ ಜಿಗುಪ್ಸೆಹೊಂದಿ ನೀರಿನ ಟ್ಯಾಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿದೆ. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣಾ ಯು.ಡಿ.ಆರ್ 30/2021 ಕಲಂ 174 ಸಿ.ಆರ್.ಪಿ.ಸಿ. ಯಂತೆ ಪ್ರಕರಣ ದಾಖಲಾಗಿರುತ್ತದೆ. ಮೃತದೇಹವನ್ನು ಹಿಂದೂ ಜಾಗರಣ ವೇದಿಕೆ ಆಂಬ್ಯುಲೆನ್ಸ್ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತರು ಪತ್ನಿ, ಒಂದು ಗಂಡು, ಮೂರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.