ರಾಜ್ಯದಲ್ಲಿ ಒಮಿಕ್ರಾನ್ ಭೀತಿ..! ರಾಜ್ಯ ಸರಕಾರದಿಂದ ನಿಯಮ ಜಾರಿ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಸಿನಿಮಾ ಹಾಲ್, ಮಾಲ್ ಗಳಿಗೆ ಪ್ರವೇಶಿಸಲು ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ
  • ಮದುವೆ ಸಮಾರಂಭಗಳಿಗೆ 500 ಜನರಿಗೆ ಮಾತ್ರ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿ ಕೋವಿಡ್ ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ.

 ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಹಲವು ಸಚಿವರು ಮತ್ತು ತಜ್ಞರೊಂದಿಗೆ ಡಿ.03ರಂದು ಸಭೆ ನಡೆಸಿದರು.

ರಾಜ್ಯ ಸರಕಾರ ಜಾರಿಗೊಳಿಸಿರುವ ನಿಯಮಗಳು ಹೀಗಿವೆ:

  • ವಿಮಾನ ನಿಲ್ದಾಣದಲ್ಲಿ ಪ್ರತಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪರೀಕ್ಷೆ ನಡೆಸಲಾಗುತ್ತದೆ. ಆದರೆ ಪರೀಕ್ಷೆ ವರದಿ ಬಂದ ನಂತರವೇ ಪ್ರಯಾಣಿಕರನ್ನು ಹೊರಗೆ ಬಿಡಲಾಗುವುದು.
  • ಸಿನಿಮಾ ಹಾಲ್, ಮಾಲ್ ಗಳಿಗೆ ಪ್ರವೇಶಿಸಲು ಎರಡು ಡೋಸ್ ವ್ಯಾಕ್ಸಿನ್ ಕಡ್ಡಾಯ.
  • ಶಾಲೆಗೆ ಹೋಗುವ ಮಕ್ಕಳಿರುವ ಹೆತ್ತವರು ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನ್ ಪಡೆದಿರಬೇಕು. ಇಲ್ಲದಿದ್ದಲ್ಲಿ ಶಾಲೆಗೆ ಮಕ್ಕಳನ್ನು ಕಳುಹಿಸುವಂತಿಲ್ಲ.
  • ಶಾಲೆ ಕಾಲೇಜುಗಳಲ್ಲಿ ಯಾವುದೇ ಸಮಾರಂಭ ನಡೆಸಲು ಅವಕಾಶವಿಲ್ಲ.
  • ಮದುವೆ ಸಮಾರಂಭಗಳಿಗೆ 500 ಜನರಿಗೆ ಮಾತ್ರ ಅವಕಾಶ.

ಕಂಟ್ರೋಲ್ ರೂಂ ಮತ್ತೆ ಆರಂಭ ಮಾಡಲಾಗುವುದು. ಪ್ರತಿ ದಿನ ಒಂದು ಲಕ್ಷ ಟೆಸ್ಟ್ ಮಾಡಲು ತೀರ್ಮಾನ ಮಾಡಲಾಗಿದೆ. ಕೋವಿಡ್ 2 ಅಲೆಯ ಸಂದರ್ಭದಲ್ಲಿ ಮಾಡಿರುವ ಆಕ್ಸಿಜನ್ ಹಾಗೂ ಐಸಿಯು ಬೆಡ್ ಸಿದ್ಧಗೊಳಿಸಲು ಸೂಚನೆ ನೀಡಲಾಗಿದೆ. ಕಳೆದ ಬಾರಿ ಉಂಟಾದ ಔಷಧಿಯ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗವುದು ಎಂದು ಆರ್.ಅಶೋಕ್ ಹೇಳಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.