ಡಿ.6ರಂದು ಅಂಬಿಕಾದಲ್ಲಿ ರಾಮಾಯಣ ಪಾಕ್ಷಿಕ ಪ್ರವಚನ ಮಾಲಿಕೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ ಐಕ್ಯುಎಸಿ ಘಟಕ, ಸಂಸ್ಕೃತ ಮತ್ತು ತತ್ತ್ವಶಾಸ್ತ್ರ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಡಿ.6ರಂದು ಸಂಜೆ 4 ಗಂಟೆಗೆ ರಾಮಾಯಣ – ಪಾಕ್ಷಿಕ ಪ್ರವಚನ ಮಾಲಿಕೆ ಉದ್ಘಾಟನೆಗೊಳ್ಳಲಿದೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿದ್ವಾಂಸ ವಿ| ಹಿರಣ್ಯ ವೆಂಕಟೇಶ್ವರ ಭಟ್ಟ ಕಾರ್ಯಕ್ರಮವನ್ನು ಉದ್ಘಾಟನೆಗೈದು ‘ವಾಲ್ಮೀಕಿ ರಾಮಾಯಣ : ಕವಿ-ಕಾವ್ಯ ಪರಿಚಯ’ ಎಂಬ ವಿಷಯದ ಬಗೆಗೆ ಉಪನ್ಯಾಸ ನೀಡಲಿದ್ದಾರೆ. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ, ಕಾಲೇಜಿನ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ಹಾಗೂ ತತ್ತ್ವಶಾಸ್ತ್ರ ವಿಭಾಗದ ಮುಖ್ಯಸ್ಥ ವಿ| ತೇಜಶಂಕರ ಸೋಮಯಾಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.