ಬೊಳುವಾರು: ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದಿಂದ ಸಾಮೂಹಿಕ ಶ್ರೀ ಗುರುಪಾದ ಪೂಜೆ ಆರಂಭ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘ ಪುತ್ತೂರು ಇದರ ವತಿಯಿಂದ ಶ್ರೀಮತ್ ಆನೆಗುಂದಿ ಜಗದ್ಗುರು ಮಹಾ ಸಂಸ್ಥಾನಮ್ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ಬೊಳುವಾರು ಶ್ರೀ ವಿಶ್ವಕರ್ಮ ಸಭಾಭವನದಲ್ಲಿ ಡಿ. ೦೫ರಂದು ಬೆಳಿಗ್ಗೆ ಸಾಮೂಹಿಕ ಶ್ರೀ ಗುರುಪಾದ ಪೂಜೆ ನಡೆಯಿತು.

ಬೆಳಿಗ್ಗೆ ಗಣಹೋಮ, ಶ್ರೀ ಗುರುಗಳಿಗೆ ಪೂರ್ಣ ಕುಂಭ ಸ್ವಾಗತ, ನಂತರ ಶ್ರೀ ಗುರುಪಾದ ಪೂಜೆ ನಡೆಯಿತು. ವಿಶ್ವೇಶ್ವರ ಪುರೋಹಿತರ ಆಚಾರ್ಯತ್ವ ವಹಿಸಿದ್ದರು. ನಂತರ ಸಭಾ ಕಾರ್ಯಕ್ರಮ ನಡೆಯಲಿದ್ದು, ಜಗದ್ಗುರು ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಯವರು ಆಶೀರ್ವಚನ ನೀಡಲಿದ್ದಾರೆ. ದ.ಕ. ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಅಧ್ಯಕ್ಷ ಜನಾರ್ದನ ಆಚಾರ್ಯ ಕಾಣಿಯೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಲ್ಕಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕುಸುಮಾಧರ ಆಚಾರ್ಯ, ಮಂಗಳೂರು ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಸಹಾಯಕ ಅಭಿಯಂತರರಾದ ಶಿವಪ್ರಸನ್ನ ಡಿ.ಎಂ, ಕಡಬ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಕೆ.ಎಸ್.ದಿನೇಶ್ ಆಚಾರ್ಯ ಮುಖ್ಯ ಅತಿಥಿಗಳಾಗಿರುವರು. 
ಸಂಜೆ ಗಂಟೆ ೪ರಿಂದ ಸಾಮೂಹಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ ನಡೆಯಲಿದೆ.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.