ಡಿ 9 – ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಡಿ 8 ಶ್ರೀ ದೇಗುಲದಲ್ಲಿ ಪಂಚಾಮೃತಾಭಿಷೇಕ, ಕಲಶಾಭಿಷೇಕ

ಕಾಣಿಯೂರು: ಕಡಬ ತಾಲೂಕು ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ ೯ರಂದು ಷಷ್ಠಿ ಮಹೋತ್ಸವ ಜರುಗಲಿದೆ. ಡಿ ೮ರಂದು ಪಂಚಮಿ ಪ್ರಯುಕ್ತ ಪೂರ್ವಾಹ್ನ ಗಂಟೆ ೯-೦೦ಕ್ಕೆ ಶ್ರೀ ದೇವರಿಗೆ ಊರವರಿಂದ ಹೊರೆಕಾಣಿಕೆ ಸಮರ್ಪಣೆಯಾಗಲಿದೆ. ಪೂರ್ವಾಹ್ನ ಗಂಟೆ ೧೦ರಿಂದ ಪಂಚಾಮೃತಾಭಿಷೇಕ ಮತ್ತು ಕಲಶಾಭಿಷೇಕ, ಮಧ್ಯಾಹ್ನ ಗಂಟೆ ೧೨ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ ೬ರಿಂದ ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂಡಳಿ ಶಾಂತಿಮೊಗರು ಮತ್ತು ಊರವರಿಂದ ಭಜನಾ ಕಾರ್ಯಕ್ರಮ, ರಾತ್ರಿ ಗಂಟೆ ೮:೦೦ಕ್ಕೆ ಮಹಾಪೂಜೆ ನಡೆಯಲಿದೆ.

 

ಡಿ 9ರಂದು ಶ್ರೀ ದೇಗುಲದಲ್ಲಿ ಷಷ್ಠಿ ಮಹೋತ್ಸವ…

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ ೯ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಷಷ್ಠಿ ಮಹೋತ್ಸವವು ಜರುಗಲಿದ್ದು, ಬೆಳಿಗ್ಗೆ ಗಂಟೆ ೮ರಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ದೇವರಿಗೆ ಕಲಶಪೂಜೆ, ಕಲಶಾಭಿಷೇಕ, ಮಧ್ಯಾಹ್ನ ಗಂಟೆ ೧೨ರಿಂದ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ ೮:೩೦ಕ್ಕೆ ಮಹಾಪೂಜೆ, ರಾತ್ರಿ ಗಂಟೆ ೮ರಿಂದ ದೇವರ ಬಲಿ ಹೊರಟು ಶ್ರೀ ಭೂತಬಲಿ ಮಹೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ದೇವರ ಬಲಿ ಒಳಗಾಗಿ ವೈದಿಕ ಮಂತ್ರಾಕ್ಷತೆ ಜರುಗಲಿದೆ.

[ ೫ ಸಾವಿರಕ್ಕೂ ಮಿಕ್ಕಿ ಭಕ್ತರು ಭಾಗಿಯಾಗುವ ನಿರೀಕ್ಷೆ- ಸತೀಶ್ ಕುಮಾರ್ ಕೆಡೆಂಜಿ

ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಡಿ ೯ರಂದು ನಡೆಯಲಿರುವ ಷಷ್ಠಿ ಮಹೋತ್ಸವದಲ್ಲಿ ೫ ಸಾವಿರಕ್ಕೂ ಅಧಿಕ ಮಂದಿ ಭಕ್ತರು ಭಾಗಿಯಾಗುವ ನಿರೀಕ್ಷೆ ಇದೆ. ಮಧ್ಯಾಹ್ನ ೧೨-೦೦ ಗಂಟೆಗೆ ಸರಿಯಾಗಿ ಶ್ರೀ ದೇವರಿಗೆ ವಿವಿಧ ಪೂಜಾ ವಿಧಿ ವಿಧಾನಗಳೊಂದಿಗೆ ಮಹಾಪೂಜೆ ನಡೆದು, ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ತಿಳಿಸಿದ್ದಾರೆ.]

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.