ಅಪ್ರಾಪ್ತ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ಶಾಲೆಯ ಆಡಳಿತಾಧಿಕಾರಿಗೆ ಜಾಮೀನು ಮಂಜೂರು

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧಿತನಾಗಿದ್ದ ಶಾಲೆಯ ಆಡಳಿತಾಧಿಕಾರಿ ಅನಿಲ್ ಕುಮಾರ್‌ ಎಂಬವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಸುಳ್ಯ ತಾಲೂಕು ದೇವಚಳ್ಳ ಗ್ರಾಮದ ಎಲಿಮಲೆ ಎಂಬಲ್ಲಿರುವ ಶಾಲೆಯೊಂದರ ಆಡಳಿತ ಅಧಿಕಾರಿ ಅನಿಲ್‌ ಕುಮಾರ್ ಎಂಬವರು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯೊರ್ವಳಿಗೆ ಸೈಕಲ್ ಕಲಿಸಿಕೊಡುತ್ತೇನೆ ಎಂದು ಹೇಳಿ, ಬಾಲಕಿಯು ಅಪ್ರಾಪ್ತೆ ಎಂದು ತಿಳಿದಿದ್ದರೂ ಸಹ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಉದ್ಧೇಶದಿಂದ ಶಾಲಾ ಕೊಠಡಿಯೊಂದರಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ನಂತರ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.‌ ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.

ಬಳಿಕ‌ ಆರೋಪಿ ಅನಿಲ್ ಕುಮಾರ್‌ರವರು ತನ್ನ ಪರ ವಕೀಲ‌ ಮಹೇಶ್ ಕಜೆಯವರ ಮುಖಾಂತರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಪೋಕ್ಸೋ‌ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಆರೋಪಿಗೆ ಜಾಮೀನು ಮಂಜೂರು ಮಾಡಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.