ಜ.2ರಂದು ನೆಲ್ಯಾಡಿಯಲ್ಲಿ ದಿ| ಎ.ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಪುತ್ತೂರು ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ಇದರ ಪುತ್ತೂರು ತಾಲೂಕು ಸಮಿತಿ, ಬಂಟರ ಸಂಘ ಪುತ್ತೂರು ತಾಲೂಕು ಇವರ ಮಾರ್ಗದರ್ಶನದಲ್ಲಿ ಮಹಿಳಾ ಬಂಟರ ಸಂಘ ಪುತ್ತೂರು ತಾಲೂಕು, ವಿದ್ಯಾರ್ಥಿ ಬಂಟರ ಸಂಘ ಪುತ್ತೂರು ತಾಲೂಕು ಇವರ ಸಹಕಾರದೊಂದಿಗೆ ವಲಯ ಬಂಟರ ಸಂಘ ನೆಲ್ಯಾಡಿ ಇವರ ಸಹಯೋಗದಲ್ಲಿ ದಿ| ಎ.ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಜ.2ರಂದು ನೆಲ್ಯಾಡಿ ಗಾಂಧಿ ಮೈದಾನದಲ್ಲಿ ನಡೆಯಲಿದೆ.

ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಮುಂಡಾಳಗುತ್ತುರವರು ಪಂದ್ಯಾಟವನ್ನು ಬೆಳಿಗ್ಗೆ 9 ಗಂಟೆಗೆ ಉದ್ಘಾಟಿಸಲಿದ್ದಾರೆ. ನಿವೃತ್ತ ಶಿಕ್ಷಣ ಸಂಯೋಜಕ ಪದ್ಮನಾಭ ಆಳ್ವ ಕೆ.ಗುತ್ತಿಮಾರು ಬೆಳ್ಳಿಪ್ಪಾಡಿಯವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸಲಿದ್ದು ಮಾಜಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರುರವರು ಕ್ರೀಡಾಪಟುಗಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಮಧ್ಯಾಹ್ನ 11 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ನಿರ್ದೇಶಕ ಚಂದ್ರಹಾಸ ಶೆಟ್ಟಿ ಎನ್. ಉದ್ಘಾಟಿಸಲಿದ್ದಾರೆ. ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಇದರ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರು ಬಹುಮಾನ ವಿತರಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಹಲವು ಗಣ್ಯರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ರೈ ಸಾರಕರೆ, ಕ್ರೀಡಾ ಸಂಚಾಲಕ ಶಶಿರಾಜ್ ರೈ ಮುಂಡಾಳಗುತ್ತು, ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಮನವಳಿಕೆಗುತ್ತು ಹಾಗೂ ನೆಲ್ಯಾಡಿ ವಲಯ ಕ್ರಿಕೆಟ್ ಪಂದ್ಯಾಟದ ಆಯೋಜನಾ ಸಮಿತಿ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.