ಗುಂಡ್ಯ: ಟಿಟಿ, ಬ್ರೀಝಾ ಕಾರು ಡಿಕ್ಕಿ-ಐವರಿಗೆ ಗಾಯ

0

ನೆಲ್ಯಾಡಿ: ಟೆಂಪೋ ಟ್ರಾವೆಲರ್ ಹಾಗೂ ಮಾರುತಿ ಸುಝುಕಿ ಬ್ರೀಝಾ ಕಾರು ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಐವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ೭೫ರ ಗುಂಡ್ಯದಲ್ಲಿ ಡಿ.31ರಂದು ಸಂಜೆ ನಡೆದಿದೆ.


ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಹಾಗೂ ಎದುರಿನಿಂದ ಬರುತ್ತಿದ್ದ ತಮಿಳುನಾಡು ಮೂಲದವರಿದ್ದ ಬ್ರೀಝಾ ಕಾರು ನಡುವೆ ಗುಂಡ್ಯ ಸಮೀಪದ ತಿರುವಿನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಹಾಗೂ ಟ್ರಾವೆಲ್ಲರ್‌ನಲ್ಲಿದ್ದ ಒಟ್ಟು ಐವರು ಗಂಭೀರ ಗಾಯಗೊಂಡಿದ್ದು, ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ತಕ್ಷಣವೇ 108ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ.

LEAVE A REPLY

Please enter your comment!
Please enter your name here