ಪುತ್ತೂರಿನ ಇತಿಹಾಸಕ್ಕೆ ಮುಕುಟಗರಿ ದೇಶಭಕ್ತ ಎನ್.ಎಸ್. ಕಿಲ್ಲೆ ಮೈದಾನ ಮಹಾದ್ವಾರ ಲೋಕಾರ್ಪಣೆ

0

ಪುತ್ತೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ಹೋರಾಟದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡ ದೇಶಭಕ್ತ ಎನ್.ಎಸ್. ಕಿಲ್ಲೆಯವರ ನೆನಪು ಮುಂದಿನ ಜನಾಂಗಕ್ಕೂ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಸವಿನೆನಪಿಗಾಗಿ ಕಿಲ್ಲೆಯವರ ಸೋದರಳಿಯ, ಕಿಲ್ಲೆ ಪ್ರತಿಷ್ಠಾನದ ಅಧ್ಯಕ್ಷ ಕಡಮಜಲು ಸುಭಾಸ್ ರೈಯವರ ಕೊಡುಗೆಯಲ್ಲಿ ನಿರ್ಮಾಣವಾಗಿರುವ `ಸ್ವಾತಂತ್ರ್ಯ ಹೋರಾಟಗಾರ ದೇಶಭಕ್ತ ಎನ್.ಎಸ್. ಕಿಲ್ಲೆ ಮೈದಾನ ಮಹಾದ್ವಾರ’ ವನ್ನು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಜ.1 ರಂದು ಲೋಕಾರ್ಪಣೆಗೊಳಿಸಿದರು.

ಬಳಿಕ ಲೋಕಾರ್ಪಣೆಯ ಸಮಾರಂಭ ಮತ್ತು ಕಿಲ್ಲೆ 120ನೇ ಜನ್ಮ ವರ್ಷಾಚರಣೆಯ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಸಂಜೀವ ಮಠಂದೂರು ವಹಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ, ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ಪುಡಾ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಪ್ರತಿಷ್ಠಾನದ ಗೌರವಾಧ್ಯಕ್ಷೆ ಶಾಂತಾ ವಿಠಲ ಶೆಟ್ಟಿ ಮುಂಬಯಿ, ಗೌರಿ ಬನ್ನೂರು, ತಾ.ಪಂ. ಇಒ ನವೀನ್ ಭಂಡಾರಿ, ಪೌರಾಯುಕ್ತ ಮಧು ಎಸ್. ಮನೋಹರ್ ಮತ್ತಿತರರು ಉಪಸ್ಥಿತರಿದ್ದರು.


LEAVE A REPLY

Please enter your comment!
Please enter your name here