ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ನಲ್ಲಿ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2020-21ನೇ ಸಾಲಿನ 14/15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆಯು ಗ್ರಾ.ಪಂ.ಸಭಾಂಗಣದಲ್ಲಿ ಜರಗಿತು.
ಗ್ರಾ.ಪಂ. ಅಧ್ಯಕ್ಷರಾದ ಲೋಹಿತಾಕ್ಷ ಕೆಡೆಂಜಿಕಟ್ಟ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕಡಬ ಪಶುಸಂಗೋಪನಾ ಇಲಾಖೆಯ ಪಶು ವೈದ್ಯಾಧಿಕಾರಿ ಡಾ| ಅಜಿತ್ ನೋಡಲ್ ಅಧಿಕಾರಿಯಾಗಿ ಭಾಗವಹಿಸಿದ್ದರು. ಗ್ರಾ.ಪಂ. ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಕೆ, ಸದಸ್ಯರಾದ ಮೋಹನ್ ಅಗಳಿ, ಜಯಂತ ಅಬೀರ, ಪ್ರವೀಣ್ ಕೆರೆನಾರು, ವಿಠಲ ಗೌಡ ಅಗಳಿ, ರವಿ ಕುಮಾರ್ ಕೆಡೆಂಜಿ, ಹರಿಣಾಕ್ಷೀ ಬಿ, ಜಯರಾಮ ಬೆಳಂದೂರು, ಗೀತಾ ಕುವೆತ್ತೋಡಿ, ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ತಾಂತ್ರಿಕಾ ಸಹಾಯಕ ಮನೋಜ್ ಕುಮಾರ್, ತಾಲೂಕು ಸಂಯೋಜಕ ಪ್ರವೀಣ್ ಹಾಗೂ ಗ್ರಾಮ ಸಂಪನ್ಮೂಲ ವ್ಯಕ್ತಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾ.ಪಂ. ಸಿಬ್ಬಂದಿಗಳು ಉಪಸ್ಥಿತರಿದ್ದರು.