ಪ್ರಗತಿ ಸ್ಟಡಿ ಸೆಂಟರ್ ಸಂಸ್ಥೆಯಲ್ಲಿ ಭ್ರಷ್ಟಾಚಾರ ಮುಕ್ತ ಭಾರತ ಅಭಿಯಾನದೊಂದಿಗೆ ಹೊಸ ವರ್ಷದ ಸಂಭ್ರಮಾಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಪುತ್ತೂರಿನ ಪ್ರಗತಿ ಸ್ಟಡಿ ಸೆಂಟರ್ ಸಂಸ್ಥೆಯಲ್ಲಿ ‘ಭ್ರಷ್ಟಾಚಾರ ಮುಕ್ತ ಭಾರತ’ ಅಭಿಯಾನದೊಂದಿಗೆ ಜ.1ರಂದು ಹೊಸ ವರ್ಷಾಚರಣೆ ಮಾಡಲಾಯಿತು. ಸುದ್ದಿ ಬಿಡುಗಡೆ ಪತ್ರಿಕಾ ಬಳಗ ಹಮ್ಮಿಕೊಂಡಿರುವ ‘ಭ್ರಷ್ಟಾಚಾರ ಮುಕ್ತ ಪುತ್ತೂರು’ ಅಭಿಯಾನಕ್ಕೆ ಬೆಂಬಲ ಸೂಚಿಸಿ ವಿದ್ಯಾಸಂಸ್ಥೆಯಲ್ಲಿ ನಡೆಸಲಾದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪುತ್ತೂರು ತಾಲೂಕು ಸಮಿತಿಯ ಅಧ್ಯಕ್ಷ ಮಹಾಬಲ ರೈ ಒಳತಡ್ಕ ಅಧ್ಯಕ್ಷತೆ ವಹಿಸಿದ್ದರು.

 

ವಿವೇಕಾನಂದ ವಿದ್ಯಾಸಂಸ್ಥೆಗಳ ಪರಿವೀಕ್ಷಣಾ ಅಧಿಕಾರಿ ರಘುರಾಜ್ ಉಬರಡ್ಕ ದಿಕ್ಸೂಚಿ ಭಾಷಣ ಮಾಡಿದರು. ಮುಖ್ಯ ಅತಿಥಿಗಳಾಗಿ ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾಗಿರುವ ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕ ಡಾ. ಯು.ಪಿ. ಶಿವಾನಂದ ಹಾಗೂ ಸುದ್ದಿ ಬಿಡುಗಡೆ ಪತ್ರಿಕೆ ಮತ್ತು ಸುದ್ದಿ ನ್ಯೂಸ್ ಚಾನೆಲ್ ನ ಮುಖ್ಯ ವರದಿಗಾರ ಸಂತೋಷ್ ಕುಮಾರ್ ಶಾಂತಿನಗರರವರು ಭಾಗವಹಿಸಿದ್ದರು. ಉಪನ್ಯಾಸಕಿ ಪ್ರಮೀಳಾ ಎನ್.ಡಿ. ಶುಭ ಹಾರೈಸಿದರು. ಪ್ರಾಂಶುಪಾಲೆ ಹೇಮಲತಾ ಗೋಕುಲನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ರಕ್ಷಾ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಸಂಚಾಲಕ ಗೋಕುಲನಾಥ ಪಿ.ವಿ. ಸ್ವಾಗತಿಸಿದರು. ಉಪನ್ಯಾಸಕಿ ಸಂಹಿತ ವಂದಿಸಿದರು. ಜ್ಯೋತಿರವರ ಪುಷ್ಪಾಂಜಲಿ ನೃತ್ಯದ ಮೂಲಕ ಕಾರ್ಯಕ್ರಮ ಆರಂಭವಾಯಿತು. ಭ್ರಷ್ಟಾಚಾರ ಮುಕ್ತ ಪುತ್ತೂರು ತಾಲೂಕು ನಿರ್ಮಾಣ ಮಾಡುವುದಾಗಿ ಸಭೆಯಲ್ಲಿ ಘೋಷಣೆ ಕೂಗಲಾಯಿತಲ್ಲದೆ, ಪ್ರತಿಜ್ಞೆ ಸ್ವೀಕರಿಸಲಾಯಿತು. ಕಾರ್ಯಕ್ರಮದ ಬಳಿಕ ಪ್ರಗತಿ ಸ್ಟಡಿ ಸೆಂಟರ್ ಆಸುಪಾಸಿನ ಎಲ್ಲಾ ಕಛೇರಿಗಳಿಗೆ ಭೇಟಿ ನೀಡಿ ಭ್ರಷ್ಟಾಚಾರ ಮುಕ್ತ ಭಾರತ ಕುರಿತು‌ ಮಾಹಿತಿ ನೀಡಿ ಸ್ಟಿಕ್ಕರ್ ವಿತರಿಸಲಾಯಿತು‌.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.