ಅಡ್ಡಹೊಳೆ: ಕಾರಿನ ಮೇಲೆ ಬಿದ್ದ ಮರ, ಓರ್ವ ಸಾವು

0

ನೆಲ್ಯಾಡಿ: ನಿಂತಿದ್ದ ಕಾರಿನ ಮೇಲೆ ಮರಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಜ.2ರಂದು ಬೆಳಿಗ್ಗೆ 7.30ರ ವೇಳೆಗೆ ನಡೆದಿದೆ.

ಉಡುಪಿಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಶಬ್ದ ಬಂದ ಹಿನ್ನೆಲೆಯಲ್ಲಿ ಚಾಲಕ ಕಾರನ್ನು ಹೆದ್ದಾರಿ ಬದಿ ನಿಲ್ಲಿಸಿ ಬಾನೆಟ್ ತೆಗೆಯುತ್ತಿದ್ದ ವೇಳೆ ಆಲುಮಡ್ಡಿ ಮರವೊಂದು ಕಾರು ಹಾಗೂ ಅವರ ಮೇಲೆಯೇ ಬಿದ್ದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಕಾರಿನಲ್ಲಿದ್ದ ಮಹಿಳೆ ಹಾಗೂ ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಇವರೆಲ್ಲರೂ ಉಡುಪಿ ಮೂಲದವರಾಗಿದ್ದು ಬೆಂಗಳೂರಿಗೆ ತೆರಳುತ್ತಿದ್ದರು ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here