ಹವ್ಯಕ ಸಭಾಭವನ ಸಮರ್ಪಣಮ್ ಉದ್ಘಾಟನೆ

0

  • ಲೋಕಾರ್ಪಣೆಗೊಳಿಸಿದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ

ಪುತ್ತೂರು: ಇಲ್ಲಿನ ಬನ್ನೂರು ಹವ್ಯಕ ಸಭಾಭವನ ‘ಸಮರ್ಪಣಮ್’ ಭಾನುವಾರ ಉದ್ಘಾಟನೆಗೊಂಡಿತು.
ಸಭಾ ಕಾರ್ಯಕ್ರಮವನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಉದ್ಘಾಟಿಸಿದರು.

ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಎಸ್., ಶಾಸಕ ಸಂಜೀವ ಮಠಂದೂರು, ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್, ಹವ್ಯಕ ಮಹಾಮಂಡಲದ ಅಧ್ಯಕ್ಷ ಆರ್.ಎಸ್. ಹೆಗಡೆ ಹರಗಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಪುಳು ಈಶ್ವರ ಭಟ್ ಉಪಸ್ಥಿತರಿದ್ದರು.
ಶ್ರೀ ಅಖಿಲ ಹವ್ಯಕ ಮಹಾಸಭಾದ ಅಧ್ಯಕ್ಷ ಡಾ. ಗಿರಿಧರ್ ಕಜೆ ಅಧ್ಯಕ್ಷತೆ ವಹಿಸಿದ್ದರು. ಗುರು ಭಿಕ್ಷೆ ಕಾರ್ಯಕ್ರಮವನ್ನು ಶಿವಶಂಕರ್ ಭಟ್ ಮನೆಯವರು ನಡೆಸಿಕೊಟ್ಟರು.

ಅಖಿಲ ಹವ್ಯಕ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಸಿಎ ವೇಣುವಿಘ್ನೇಶ್ ಸಂಪ ಸ್ವಾಗತಿಸಿದರು. ವಕೀಲ ಮಹೇಶ್ ಕಜೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here