ನೆಲ್ಯಾಡಿ: ದಿ| ಎ.ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

0

ನೆಲ್ಯಾಡಿ: ಪುತ್ತೂರು ತಾಲೂಕು ಯುವ ಬಂಟರ ಸಂಘ ಇವರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿ, ಬಂಟರ ಸಂಘ ಪುತ್ತೂರು ತಾಲೂಕು ಇವರ ಮಾರ್ಗದರ್ಶನದಲ್ಲಿ ಮಹಿಳಾ ಬಂಟರ ಸಂಘ ಪುತ್ತೂರು ತಾಲೂಕು, ವಿದ್ಯಾರ್ಥಿ ಬಂಟರ ಸಂಘ ಪುತ್ತೂರು ತಾಲೂಕು ಇವರ ಸಹಕಾರದೊಂದಿಗೆ ವಲಯ ಬಂಟರ ಸಂಘ ನೆಲ್ಯಾಡಿ ಇವರ ಸಹಯೋಗದಲ್ಲಿ ದಿ| ಎ.ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಜ.೨ರಂದು ನೆಲ್ಯಾಡಿ ಗಾಂಧಿ ಮೈದಾನದಲ್ಲಿ ನಡೆಯಿತು.

ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಮುಂಡಾಳಗುತ್ತುರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಂಟರ ಸಂಘ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಶಿಕ್ಷಣ ಸಂಯೋಜಕ ಪದ್ಮನಾಭ ಆಳ್ವ ಕೆ.ಗುತ್ತಿಮಾರು ಬೆಳ್ಳಿಪ್ಪಾಡಿಯವರು ಧ್ವಜಾರೋಹಣ ನೆರವೇರಿಸಿದರು. ಪುತ್ತೂರು ತಾಲೂಕು ಮಹಿಳಾ ಬಂಟರ ಸಂಘ ಅಧ್ಯಕ್ಷೆ ಮೀನಾ ಭಾಸ್ಕರ್ ರೈ ಮಾದೋಡಿ, ಪುತ್ತೂರು ತಾಲೂಕು ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ, ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಇದರ ನಿರ್ದೇಶಕ ಚಂದ್ರಹಾಸ ಶೆಟ್ಟಿ ಎನ್.,ರವರು ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.

ಬಂಟರ ಯಾನೆ ನಾಡವರ ಮಾತೃಸಂಘ ಮಂಗಳೂರು ಇದರ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಯುವ ಬಂಟರ ಸಂಘದ ಅದ್ಯಕ್ಷ ಪ್ರಕಾಶ್ ರೈ ಸಾರಕರೆ, ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಬಂಟರ ಸಂಘ ಪುತ್ತೂರು ತಾಲೂಕು ಸಮಿತಿ ವಿಶೇಷ ಆಹ್ವಾನಿತರಾದ ಸತೀಶ್ ರೈ ಕೊಣಾಲುಗುತ್ತು, ಯುವ ಬಂಟರ ಸಂಘದ ಮಾಜಿ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಉಪ್ಪಳಿಗೆ, ಬಂಟರ ಸಂಘ ಪುತ್ತೂರು ತಾಲೂಕು ಸಮಿತಿ ನಿರ್ದೇಶಕರಾದ ಸದಾಶಿವ ರೈ ಸೂರಂಬೈಲು, ಸುರೇಶ್ ರೈ ಸೂಡಿಮುಳ್ಳು, ಸುಭಾಶ್‌ಕುಮಾರ್ ಶೆಟ್ಟಿ ಆರ್‍ವಾರ, ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ಗುಡ್ಡಪ್ಪ ಶೆಟ್ಟಿ ಕಪಿಲಾ, ಸಹಸಂಚಾಲಕ ಜಯಾನಂದ ಬಂಟ್ರಿಯಾಲ್ ನೆಲ್ಯಾಡಿ, ಪ್ರಧಾನ ಕಾರ್ಯದರ್ಶಿ ವಾಣಿಸುಂದರ ಶೆಟ್ಟಿ, ಸಾಹಿತಿ ನಾರಾಯಣ ರೈ ಅಗ್ರಾಳ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಮನವಳಿಕೆಗುತ್ತು ಸ್ವಾಗತಿಸಿ, ನೆಲ್ಯಾಡಿ ಗ್ರಾ.ಪಂ.ಸದಸ್ಯ ರವಿಪ್ರಸಾದ್ ಶೆಟ್ಟಿ ವಂದಿಸಿದರು.

 ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ನೆಲ್ಯಾಡಿ ಗಾಂಧಿಮೈದಾನದಲ್ಲಿರುವ ಗಾಂಧಿಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

LEAVE A REPLY

Please enter your comment!
Please enter your name here