ನೆಲ್ಯಾಡಿ: ಯುವ ಬಂಟರ ಸಂಘದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ-ಸಭಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ನೆಲ್ಯಾಡಿ: ದಿ| ಎ.ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ
ನೆಲ್ಯಾಡಿ: ಪುತ್ತೂರು ತಾಲೂಕು ಯುವ ಬಂಟರ ಸಂಘ ಇವರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಪುತ್ತೂರು ತಾಲೂಕು ಸಮಿತಿ, ಬಂಟರ ಸಂಘ ಪುತ್ತೂರು ತಾಲೂಕು ಇವರ ಮಾರ್ಗದರ್ಶನದಲ್ಲಿ ಮಹಿಳಾ ಬಂಟರ ಸಂಘ ಪುತ್ತೂರು ತಾಲೂಕು, ವಿದ್ಯಾರ್ಥಿ ಬಂಟರ ಸಂಘ ಪುತ್ತೂರು ತಾಲೂಕು ಇವರ ಸಹಕಾರದೊಂದಿಗೆ ವಲಯ ಬಂಟರ ಸಂಘ ನೆಲ್ಯಾಡಿ ಇವರ ಸಹಯೋಗದಲ್ಲಿ ದಿ| ಎ.ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಜ.೨ರಂದು ನೆಲ್ಯಾಡಿ ಗಾಂಧಿ ಮೈದಾನದಲ್ಲಿ ನಡೆಯಿತು.

ಪಂದ್ಯಾಟದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮವನ್ನು ಸುಧೀರ್ ಶೆಟ್ಟಿ ನೇಸರ ಕಂಪ ಮೂಡಂಬೈಲುರವರು ತೆಂಗಿನ ಗರಿ ಅರಳಿಸುವ ಮೂಲಕ ಉದ್ಘಾಟಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತುರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಬಂಟರ ಸಂಘವು ಗ್ರಾಮ ಗ್ರಾಮಗಳಲ್ಲಿ ಸಂಘಟನೆಯಾಗುವ ಮೂಲಕ ಇನ್ನಷ್ಟೂ ಬಲಗೊಳ್ಳಬೇಕು. ಯುವ ಬಂಟರ ಸಂಘದ ಸದಸ್ಯರೂ ಕೇವಲ ಕ್ರಿಕೆಟ್ ಪಂದ್ಯಾಟಕ್ಕೆ ಸೀಮಿತಗೊಳ್ಳದೇ ಸಂಘದ ವತಿಯಿಂದ ನಡೆಯುವ ಪ್ರತಿಯೊಂದು ಚಟುವಟಿಕೆಯಲ್ಲೂ ಸಕ್ರೀಯರಾಗಿ ಭಾಗವಹಿಸಬೇಕು. ಬಂಟರ ಸಂಘದಲ್ಲಿರುವ ನಾಯಕತ್ವ ಗುಣದ ಪರಂಪರೆಯನ್ನು ಮುನ್ನಡೆಸಿಕೊಂಡು ಹೋಗಲು ಯುವ ಸಂಘದ ಸದಸ್ಯರ ಪಾಲ್ಗೊಳ್ಳುವಿಕೆ ಅತೀ ಮುಖ್ಯವಾಗಿದೆ ಎಂದರು. ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ರೈ ಮನವಳಿಕೆಗುತ್ತು, ಬಂಟರ ಸಂಘದ ಪುತ್ತೂರು ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿಯವರು ಸಂದರ್ಭೋಚಿತವಾಗಿ ಮಾತನಾಡಿ ಶುಭಹಾರೈಸಿದರು.

ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಉಪಾಧ್ಯಕ್ಷ ಸುಬ್ಬಣ್ಣ ರೈ ಖಂಡಿಗ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಮುಂಡಾಳಗುತ್ತು, ಬಂಟರ ಸಂಘ ಪುತ್ತೂರು ತಾಲೂಕು ಸಮಿತಿ ವಿಶೇಷ ಆಹ್ವಾನಿತರಾದ ತಿಲಕ್ ರೈ ಕುತ್ಯಾಡಿ, ನಾಟಿವೈದ್ಯೆ ಹೇಮಾವತಿ ರೈ ಬಲ್ಯ-ರಾಮನಗರ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ರೈ ಸಾರಕರೆ, ಕ್ರೀಡಾ ಸಂಚಾಲಕ ಶಶಿರಾಜ್ ರೈ ಮುಂಡಾಳಗುತ್ತು, ಸುಭಾಷ್ ರೈ ಬಳ್ಳಮಜಲುಗುತ್ತು, ಉಮೇಶ್ ರೈ ಮನವಳಿಕೆಗುತ್ತು, ಪ್ರವೀಣ್ ಭಂಡಾರಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ನಿಯೋಜಿತ ಜೊತೆ ಕಾರ್ಯದರ್ಶಿ ರಂಜಿನಿ ಬಿ.ಶೆಟ್ಟಿ, ರವಿಚಂದ್ರ ರೈ ಕುಂಬ್ರ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನೆಲ್ಯಾಡಿ ವಲಯ ಬಂಟರ ಸಂಘದ ಸಹಸಂಚಾಲಕ ಜಯಾನಂದ ಬಂಟ್ರಿಯಾಲ್‌ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಲ್ಯಾಡಿ ವಲಯ ಬಂಟರ ಸಂಘದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಮನವಳಿಕೆಗುತ್ತು ಸ್ವಾಗತಿಸಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಉಪಾಧ್ಯಕ್ಷ ಸದಾಶಿವ ಶೆಟ್ಟಿ ಮಾರಂಗ ವಂದಿಸಿದರು. ಉಪನ್ಯಾಸಕ ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಚಿತ್ರಾ ಜೆ.ಬಂಟ್ರಿಯಾಲ್, ನಮಿತಾ ಶೆಟ್ಟಿ ಪ್ರಾರ್ಥಿಸಿದರು.

 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.