ಜ. 4 ರಂದು ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವರ 13 ನೇ ಪ್ರತಿಷ್ಠಾ ವಾರ್ಷಿಕೋತ್ಸವ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ಪುತ್ತೂರು: ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ 13 ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಶ್ರೀ ವಿಷ್ಣು ಸೇವಾ ಸಮಿತಿ ಕುರಿಯ ಇದರ ಸಹಕಾರದೊಂದಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜ. 4  ಮತ್ತು 5ರಂದು ವಿಜೃಂಭಣೆಯಿಂದ ಜರಗಲಿದೆ. 4 ರಂದು ಸಂಜೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಸೌರಭ, ರಾತ್ರಿ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಸಕ ಸಂಜೀವ ಮಠಂದೂರುರವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಳ್ಳಾಲ ಕುರಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಧು ನರಿಯೂರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಶ್ರೀ ವಿಷ್ಣು ಸೇವಾ ಸಮಿತಿಯ ಗೌರವಾಧ್ಯಕ್ಷ ಶಿವರಾಮ ಆಳ್ವ ಬಳ್ಳಮಜಲುಗುತ್ತು, ಎಸ್‌ಡಿಪಿ ರೆಮೆಡೀಸ್ ಮತ್ತು ರಿಸರ್ಚ್ ಸೆಂಟರ್‌ನ ಡಾ.ಹರಿಕೃಷ್ಣ ಪಾಣಾಜೆ, ಜಿಲ್ಲಾ ಧಾರ್ಮಿಕ ಪರಿಷತ್‌ನ ಸದಸ್ಯ ಮುರಳೀಕೃಷ್ಣ ಹಸಂತಡ್ಕ ಭಾಗವಹಿಸಲಿದ್ದಾರೆ. ಸಾಧಕ ಸಾರ್ಥಕ ಧಾರ್ಮಿಕ ಬದುಕಿಗೆ ಶ್ರಮಿಸಿದವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಯದು ಕುಮಾರ್ ಕೊಳತ್ತಾಯ, ಮೋಹನ್ ರಾವ್ ಕೊಡ್ಲರು, ವಿಷ್ಣುಮೂರ್ತಿ ಬಡೆಕಿಲ್ಲಾಯ, ಶ್ರೀಹರಿ ಕೆ.ಎನ್ ಮತ್ತು ಜ್ಞಾನ ರೈಯವರಿಗೆ ಸನ್ಮಾನ ನಡೆಯಲಿದೆ. ರಾತ್ರಿ 9 ರವೇರೆಗೆ ಶ್ರೀ ವಿಷ್ಣುಮೂರ್ತಿ ಭಜನ ಮಂಡಳಿ ಉದಯಗಿರಿ ಮುಂಡೂರು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕ ರಂಗಪೂಜೆ ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ.

೦೫ ರಂದು ಬೆಳಿಗ್ಗೆಯಿಂದ ಸಂಜೆ ತನಕ ಆಹ್ವಾನಿತ ತಂಡಗಳಿಂದ ಅರ್ಧ ಏಕಾಹ ಭಜನೆ ನಡೆಯಲಿದೆ. ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿ ಹೋಮ, ಕಲಶಪೂಜೆ, ಆಶ್ಲೇಷ ಬಲಿ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ ನಡೆಯಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಬಳಿಕ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ದೈವಗಳ ಭಂಡಾರ ತೆಗೆಯುವುದು, ಮಹಾಪೂಜೆ ಪ್ರಸಾದ ವಿತರಣೆ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಬೆಡಿ ಪ್ರದರ್ಶನ, ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ವೈಧಿಕ ಮಂತ್ರಾಕ್ಷತೆ ಬಳಿಕ ಅನ್ನಸಂತರ್ಪಣೆ ನಡೆಲಿದೆ. ರಾತ್ರಿ 10.30 ಕ್ಕೆ ದೈವಗಳ ನೇಮೋತ್ಸವ ನಡೆಯಲಿದೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಗ್ರಾಮದ ಸಮಸ್ತ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವ್ಯವಸ್ಥಾಪನಾ ಸಮಿತಿ, ಅರ್ಚಕ ವೃಂದ, ಶ್ರೀ ವಿಷ್ಣು ಸೇವಾ ಸಮಿತಿ ಹಾಗೂ ಊರಿನ ಹತ್ತು ಸಮಸ್ತರ ಪ್ರಕಟಣೆ ತಿಳಿಸಿದೆ.

ವಿಶೇಷ ಆಕರ್ಷಣೆಯಾಗಿ ಜ.೦೪ ರಂದು ರಾತ್ರಿ 9.30 ರಿಂದ ವಿಜಯ ಕುಮಾರ್ ಕೋಡಿಯಾಲ್‌ಬೈಲ್ ನಿರ್ದೇಶನದಲ್ಲಿ ಕಲಾಸಂಗಮ ಕಲಾವಿದರು ಅಭಿನಯಿಸುವ ವಿಭಿನ್ನ ಶೈಲಿಯ ತುಳು ನಾಟಕ ` ಶಿವಧೂತೆ ಗುಳಿಗ’ ನಡೆಯಲಿದೆ.

ಗೊನೆ ಮುಹೂರ್ತ
ದ.30 ರಂದು ವಾರ್ಷಿಕೋತ್ಸವಕ್ಕೆ ಗೊನೆ ಮುಹೂರ್ತ ನಡೆಯಿತು.ಆನಂದ ಕುಮಾರ್ ಉಳ್ಳಾಲರವರ ತೋಟದಲ್ಲಿ ದೇವಸ್ಥಾನದ ಪವಿತ್ರಪಾಣಿ ವೆಂಕಟರಮಣ ನಕ್ಷತ್ರಿತ್ತಾಯ ಕೊಡ್ಲಾರುರವರು ಗೊನೆ ಮುಹೂರ್ತ ನೆರೆವೇರಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ಪ್ರಕಾಶ್ ರಾವ್ ಕೊಡ್ಲಾರು, ಸಹಾಯಕ ಗುರುರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಚಂದ್ರಹಾಸ ರೈ ತುಂಬೆತ್ತಕೋಡಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಧು ನರಿಯೂರು, ಶ್ರೀ ವಿಷ್ಣು ಸೇವಾ ಸಮಿತಿ ಗೌರವಾಧ್ಯಕ್ಷ ಶಿವರಾಮ ಆಳ್ವ ಬಳ್ಳಮಜಲುಗುತ್ತು, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಜಯರಾಜ್ ಭಂಡಾರಿ, ಶಶಿಧರ ಕಿನ್ನಿಮಜಲು, ಜಯಶೀಲ ರೈ, ಧನರಾಜ್ ಆಲೆಕ್ಕಿ, ಅರುಣಾ ಸಿ.ರೈ, ಗಣೇಶ್ ರೈ, ಸತೀಶ್ ರೈ ಡಿಂಬ್ರಿ, ಸುಂದರ ಪೂಜಾರಿ, ಇ.ಕೃಷ್ಣ, ಶ್ರೀನಿವಾಸ ನಾಯಕ್, ಗುಣಪಾಲ್ ಗೌಡ ಅಲ್ಲದೆ ವಿಶ್ವನಾಥ ರೈ ನಿರಾಲ ಸೇರಿದಂತೆ ನೂರಾರು ಭಕ್ತಾಧಿಗಳು ಭಾಗವಹಿಸಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.