ಮಿಶನ್‌ಮೂಲೆ-ಮೊಟ್ಟೆತ್ತಡ್ಕ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ, ಮಹಾ ಚಂಡಿಕಾಯಾಗ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮಿಶನ್‌ಮೂಲೆ-ಮೊಟ್ಟೆತ್ತಡ್ಕ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಮಹಾ ಚಂಡಿಕಾಯಾಗವು ಜ.2 ರಂದು ಜರಗಿತು.


ಬೆಳಿಗ್ಗೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಚಂಡಿಕಾಯಾಗ ಪ್ರಾರಂಭ, ಕಲಶ ಪೂಜೆ, ಪೂರ್ವಾಹ್ನ ಚಂಡಿಕಾಯಾಗದ ಪೂರ್ಣಾಹುತಿ, ನಾಗದೇವರಲ್ಲಿ ತಂಬಿಲ ಸೇವೆ, ದೈವಗಳಿಗೆ ತಂಬಿಲ, ಮಧ್ಯಾಹ್ನ ದೇವರಿಗೆ ಕಲಶಾಭಿಷೇಕ, ಮಹಾ ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂರ್ಪಣೆ ನಡೆಯಿತು. ಅದೇ ದಿನ ರವಿವಾರ ಬೆಳಿಗ್ಗೆ ಸೂರ್ಯೋದಯದಿಂದ ಸಂಜೆ ಸೂರ್ಯಾಸ್ತದವರೆಗೆ ಅರ್ಧ ಏಕಾಹ ಭಜನೆ ಹಾಗೂ ಸಂಜೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ನೆರವೇರಿತು.

ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಮೋಹನ್ ರೈ ಮಿಶನ್‌ಮೂಲೆ, ಅಧ್ಯಕ್ಷ ಕೆ.ವೇಣುಗೋಪಾಲ ಗೌಡ, ಕಾರ್ಯದರ್ಶಿ ಕೆ.ಬಿ ಶೇಖರ್, ಉಪಾಧ್ಯಕ್ಷ ರಾಮ ಶೆಟ್ಟಿ, ಜೊತೆ ಕಾರ್ಯದರ್ಶಿ ಲಕ್ಷ್ಮಣ ಶೆಟ್ಟಿ, ಕೋಶಾಧಿಕಾರಿ ಮೋಹನ್ ಕುಮಾರ್, ಲೆಕ್ಕಪರಿಶೋಧಕ ಬಿ.ವಿಶ್ವನಾಥ್ ರೈಯವರೊಂದಿಗೆ ಸಾವಿರಾರು ಭಕ್ತಾಧಿಗಳು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡರು.

12 ಭಜನಾ ಮಂಡಳಿಯಿಂದ ಭಜನೆ..
ಈ ಸಂದರ್ಭದಲ್ಲಿ ಸರ್ವೆ ಭಕ್ತಕೋಡಿ ಶ್ರೀರಾಮ ಭಜನಾ ಮಂಡಳಿ, ಕುರಿಯ ಶ್ರೀ ಮಹಾವಿಷ್ಣುಮೂರ್ತಿ ಭಜನಾ ಮಂಡಳಿ, ಮುಕ್ರಂಪಾಡಿ ಸುಭದ್ರ ಮಹಿಳಾ ಭಜನಾ ಮಂಡಳಿ, ಪಾಲಿಂಜೆ ಶ್ರೀ ಮಹಾವಿಷ್ಣು ಮಹಿಳಾ ಭಜನಾ ಮಂಡಳಿ, ಸರ್ವೆ ಕಲ್ಪಣೆ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ, ನರಿಮೊಗರು ಸೇರಾಜೆ ಶ್ರೀ ಶಾರದಾಂಬ ಭಜನಾ ಮಂಡಳಿ, ಶಿವನಗರ ಶಿವಮಣಿ ಭಜನಾ ಮಂಡಳಿ, ಬಲ್ನಾಡು ಉಜ್ರುಪಾದೆ ಶ್ರೀ ಭಟ್ಟಿವಿನಾಯಕ ಭಜನಾ ಮಂಡಳಿ, ಕುಂಜೂರುಪಂಜ ಶ್ರೀ ದುರ್ಗಾ ಭಜನಾ ಮಂಡಳಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಕೆಮ್ಮಿಂಜೆ ಶ್ರೀರಾಮ ಮಹಿಳಾ ಭಜನಾ ಮಂಡಳಿ, ಕೆಮ್ಮಿಂಜೆ ಶ್ರೀರಾಮ ಭಜನಾ ಮಂಡಳಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನೆರವೇರಲ್ಪಟ್ಟಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.