ಸಂಪ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದ ಪ್ರತಿಷ್ಠಾ ಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು:ಆರ್ಯಾಪು ಗ್ರಾಮದ ಸಂಪ್ಯ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಜ.26ರಂದು ನಡೆಯಲಿರುವ ಪ್ರತಿಷ್ಠಾ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರ ಬಿಡುಗಡೆಯು ಜ.2ರಂದು ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.


ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಅಧಿಕಾರಿ ಸೋಮಶೇಖರ ರೈ ಇಳಂತಾಜೆ ಮುಕ್ರಂಪಾಡಿಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಕ್ಷೇತ್ರದ ತಂತ್ರಿಗಳಾದ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯರು ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಮಾತನಾಡಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯುವ ಬಗ್ಗೆ ಆಶಯ ವ್ಯಕ್ತಪಡಿಸಿ ಎಲ್ಲರ ಸಹಕಾರ ಕೋರಿದರು.

ಸ್ವಾಗತಿಸಿದ, ಮಾತನಾಡಿ ಉತ್ಸವ ಸಮಿತಿ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಂತೆಯೇ ಈ ಕಾರ್ಯಕ್ರಮವೂ ಅಚ್ಚುಕಟ್ಟಾಗಿ ನಡೆಯುವಂತಾಗಲು ಎಲ್ಲರ ಸಹಕಾರ ಕೋರಿದರು. ಉತ್ಸವ ಸಮಿತಿ ಗೌರವಾಧ್ಯಕ್ಷ ಅರುಣ್ ಕುಮಾರ್ ಪುತ್ತಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉತ್ಸವ ಸಮಿತಿ ಉಪಾಧ್ಯಕ್ಷ ಭೀಮಯ್ಯ ಭಟ್, ನಗರಸಭಾ ಸದಸ್ಯ ಶೀನಪ್ಪನಾಯ್ಕ, ಮಾಜಿ ಸದಸ್ಯ ರಮೇಶ್ ರೈ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಕುಮರ್ ನಾಯರ್, ಲಕ್ಮಣ್ ಬೈಲಾಡಿ, ಸೀತಾರಾಮ ಶೆಟ್ಟಿ ಕಂಬಳತ್ತಡ್ಡ, ವಿನ್ಯಾಸ್, ಜಗದೀಶ, ಶಶಿಕಲಾ, ಪ್ರೇಮ, ವಿವಿಧ ಸಮಿತಿ ಸಂಚಾಲಕರು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು. ಸಮಿತಿ ಕಾರ್ಯದರ್ಶಿ ಉದಯಕುಮಾರ್ ರೈ ವಂದಿಸಿದರು. ಹರಿಣಿ ಪುತ್ತೂರಾಯ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.