ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹದಿಹರೆಯದ ಸಮಸ್ಯೆಗಳು ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಯುವ ರೆಡ್‍ಕ್ರಾಸ್ ಘಟಕ ಹಾಗೂ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇವರ ನೇತೃತ್ವದಲ್ಲಿ ಅರಿವು ಕಾರ್ಯಕ್ರಮದಡಿಯಲ್ಲಿ “ಹದಿಹರೆಯದ ಸಮಸ್ಯೆಗಳು” ಎಂಬ ವಿಷಯದ ಬಗ್ಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಪದ್ಮನಾಭ ಕೆ ಇವರು ವಹಿಸಿದ್ದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಸೂತಿ ಮತ್ತು ಬಂಜೆತನ ನಿವಾರಣಾ ತಜ್ಞೆ ಡಾ. ಶ್ರೀಲತಾರವರು ವಿದ್ಯಾರ್ಥಿನಿಯರಿಗೆ ಹದಿಹರೆಯದ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರೋಟರಿ ಸೆಂಟ್ರಲ್ ಪುತ್ತೂರು ಇದರ ಅಧ್ಯಕ್ಷರಾದ ರೊ. ನವೀನ್‍ಚಂದ್ರ ನಾಯಕ್ ಹಾಗೂ ಅರಿವು ಕಾರ್ಯಕ್ರಮದ ಕೊಆರ್ಡಿನೇಟರ್ ರೊ. ಸನತ್ ಕುಮಾರ್ ಹಾಗೂ ಕಾಲೇಜಿನ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ವೆಂಕಟೇಶ್ ಪ್ರಸನ್ನ ಹಾಗೂ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾದ ಮಮತ. ಯು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.