ವಿಟ್ಲದಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ಬಡ ಕುಟುಂಬಗಳಿಗೆ ಆರ್ಥಿಕ ಚೈತನ್ಯ ಮೂಡಿಸುವ ಕೆಲಸ ಕೇಂದ್ರದಿಂದ ಆಗಿದೆ: ಮಠಂದೂರು

ವಿಟ್ಲ: ಕೋವಿಡ್ ನಂತಹ ಕಠಿಣ ಪರಿಸ್ಥಿತಿಯಲ್ಲಿಯೂ ಜನರಿಗೆ ಆರೋಗ್ಯದ ಜೊತೆಗೆ ಬದುಕು ನೀಡುವ ಕೆಲಸ ಕೇಂದ್ರ ಸರಕಾರದಿಂದ ಆಗಿದೆ.  ಬಡ ಕುಟುಂಬಗಳಿಗೆ ಆರ್ಥಿಕ ಚೈತನ್ಯ ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೆರವು ನೀಡಿದೆ. ಕೋವಿಡ್ 19 ಮೂರನೇ ಅಲೆಗೆ ಸಾಕಷ್ಟು ಮುನ್ನೆಚರಿಕೆ ಹಾಗೂ ಜನ ಜಾಗೃತಿ ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.

ಅವರು ಜ.4ರಂದು ವಿಟ್ಲದ ಪ್ರವಾಸಿ ಮಂದಿರದಲ್ಲಿ ರಾಜ್ಯ ಸರ್ಕಾರ ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ನೀಡಿದ ಪರಿಹಾರ ಮೊತ್ತ 1ಲಕ್ಷ ರೂಪಾಯಿಯ ಚೆಕ್ ವಿತರಣೆ ಮಾಡಿ ಮಾತನಾಡಿದರು.

ಕೋವಿಡ್ 19 ಮೂರನೇ ಅಲೆಯ ಮುನ್ನೆಚರಿಕೆಯ ನಿಟ್ಟಿನಲ್ಲಿ ವಾರದ ಒಳಗೆ ವೈದ್ಯರ ಸಭೆಯನ್ನು ನಡೆಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು.ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಕ್ಸಿಜನ್ ಘಟಕ ಹಾಗೂ ವೈದ್ಯರನ್ನು ನೀಡಲಾಗಿದೆ. ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು ಎಂದರು. ವಿಟ್ಲ ಹೋಬಳಿಯ ವಿಟ್ಲ ಕಸಬಾ, ಕೆದಿಲ, ಕುಳ, ಪುಣಚ, ಮಾಣಿಲ ಗ್ರಾಮಗಳ ಕೋವಿಡ್ ನಿಂದ ಮೃತಪಟ್ಟ 11ಮಂದಿಗೆ ಚೆಕ್ ವಿತರಣೆಯನ್ನು ಮಾಡಲಾಯಿತು.

ಕೆದಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ, ಮಾಣಿಲ ಗ್ರಾಮ ಪಂಚಾಯತ್  ಉಪಾಧ್ಯಕ್ಷ ರಾಜೇಶ್ ಕುಮಾರ್ ಬಾಳೆಕಲ್ಲು, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ಪುತ್ತೂರು ಎ. ಪಿ. ಎಂ. ಸಿ. ಮಾಜಿ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಅರುಣ್ ಎಂ. ವಿಟ್ಲ, ಮೋಹನದಾಸ ಉಕ್ಕುಡ, ಕಾನ ಈಶ್ವರ ಭಟ್, ಉಪತಹಸೀಲ್ದಾರ್ ವಿಜಯಮಿಕ್ರಮ, ಪ್ರಭಾರ ಕಂದಾಯ ನಿರೀಕ್ಷಕ ಮಂಜುನಾಥ, ಗ್ರಾಮಕರಣಿಕ ಪ್ರಕಾಶ, ವಿನೋದ್, ಕೃತಿಕಾ, ಸುರೇಶ್ ಮೊದಲಾದವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.