ನೆಲ್ಯಾಡಿ: ಪುತ್ತೂರು ತಾ| ಯುವ ಬಂಟರ ಸಂಘದ ಆಶ್ರಯದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ಸಮಾರೋಪ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

 

ನೆಲ್ಯಾಡಿ: ಪುತ್ತೂರು ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಪುತ್ತೂರು ತಾಲೂಕು ಸಮಿತಿ, ಬಂಟರ ಸಂಘ ಪುತ್ತೂರು ತಾಲೂಕು ಇವರ ಮಾರ್ಗದರ್ಶನದಲ್ಲಿ ಮಹಿಳಾ ಬಂಟರ ಸಂಘ ಪುತ್ತೂರು ತಾಲೂಕು, ವಿದ್ಯಾರ್ಥಿ ಬಂಟರ ಸಂಘ ಪುತ್ತೂರು ತಾಲೂಕು ಇವರ ಸಹಕಾರದೊಂದಿಗೆ ವಲಯ ಬಂಟರ ಸಂಘ ನೆಲ್ಯಾಡಿ ಇವರ ಸಹಯೋಗದಲ್ಲಿ ದಿ| ಎ.ಜೀವನ್ ಭಂಡಾರಿ ಸಿದ್ಯಾಳ ಸ್ಮರಣಾರ್ಥ ನಡೆದ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ಸಮಾರೋಪ ಜ.2ರಂದು ಸಂಜೆ ನಡೆಯಿತು.


ಪುತ್ತೂರು ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಪ್ರಕಾಶ್ ರೈ ಸಾರಕರೆ ಅಧ್ಯಕ್ಷತೆ ವಹಿಸಿದ್ದರು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರು ವಿಜೇತರಿಗೆ ಬಹುಮಾನ ವಿತರಿಸಿ ಶುಭಹಾರೈಸಿದರು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಪುತ್ತೂರು ತಾಲೂಕು ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ, ಉಪಾಧ್ಯಕ್ಷ ಸುಬ್ಬಣ್ಣ ರೈ ಖಂಡಿಗ, ಪ್ರತಾಪ್‌ಚಂದ್ರ ರೈ ಕುದ್ಮಾರುಗುತ್ತು, ರಾಜೇಶ್ ಶೆಟ್ಟಿ ಸಂಪ್ಯಾಡಿ, ಪ್ರವೀಣ್ ಭಂಡಾರಿ ಪುರ, ಪುತ್ತೂರು ತಾಲೂಕು ಯುವ ಬಂಟರ ಸಂಘದ ನಿಯೋಜಿತ ಅಧ್ಯಕ್ಷ ಶಶಿರಾಜ್ ರೈ, ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೈ ಬಿ., ಕೋಶಾಧಿಕಾರಿ ಕೆ.ಸಿ.ಅಶೋಕ್ ಶೆಟ್ಟಿ, ಜೊತೆ ಕಾರ್ಯದರ್ಶಿ ರಂಜಿನಿ ಬಿ.ಶೆಟ್ಟಿ, ಸವಣೂರು ಹಾ.ಉ.ಸಹಕಾರಿ ಸಂಘದ ಅಧ್ಯಕ್ಷ ಸುಪ್ರೀತ್ ರೈ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಉಪಾಧ್ಯಕ್ಷ ಸದಾಶಿವ ಶೆಟ್ಟಿ ಮಾರಂಗ, ಬಂಟರ ಸಂಘ ನೆಲ್ಯಾಡಿ ವಲಯದ ಪ್ರಧಾನ ಕಾರ್ಯದರ್ಶಿ ವಾಣಿಸುಂದರ ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಶೆಟ್ಟಿ ಅಶ್ವಮೇಧ ಮತ್ತಿತರರು ಉಪಸ್ಥಿತರಿದ್ದರು. ಬಂಟರ ಸಂಘದ ನೆಲ್ಯಾಡಿ ವಲಯ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ಮನವಳಿಕೆ ಸ್ವಾಗತಿಸಿ, ಕ್ರಿಕೆಟ್ ಪಂದ್ಯಾಟ ಯಶಸ್ವಿಯಾಗಿ ನಡೆಯಲು ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು. ಸಹ ಸಂಚಾಲಕ ಜಯಾನಂದ ಬಂಟ್ರಿಯಾಲ್ ವಂದಿಸಿದರು.

ಬಹುಮಾನ ವಿತರಣೆ:
ಯುವ ಬಂಟರ ಸಂಘದ ಸದಸ್ಯರ ನಡುವೆ ನಡೆದ ಕ್ರಿಕೆಟ್ ಪಂದ್ಯಾಟದಲ್ಲಿ ಸಿಝ್ಲರ್ ಪುತ್ತೂರು ತಂಡ ಪ್ರಥಮ ಹಾಗೂ ರತ್ನಶ್ರೀ ಪಾಣಾಜೆ ತಂಡ ದ್ವಿತೀಯ ಬಹುಮಾನ ಪಡೆದುಕೊಂಡಿತು. ಮುಂದಿನ ವರ್ಷದ ಕ್ರಿಕೆಟ್ ಪಂದ್ಯಾಟದ ಆತಿಥ್ಯ ವಹಿಸಿಕೊಂಡಿರುವ ಪಾಣಾಜೆ ವಲಯಕ್ಕೆ ಇದೇ ವೇಳೆ ವೀಳ್ಯ ನೀಡಲಾಯಿತು. ಮೆಸ್ಕಾಂ ನೆಲ್ಯಾಡಿ ಶಾಖಾ ಜೆಇ ರಮೇಶ್, ತಾ.ಪಂ.ಮಾಜಿ ಸದಸ್ಯೆ ಉಷಾ ಅಂಚನ್, ನೆಲ್ಯಾಡಿ ಗ್ರಾ.ಪಂ.ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್, ಸದಸ್ಯ ಮೊಹಮ್ಮದ್ ಇಕ್ಬಾಲ್, ನೋಟರಿ ನ್ಯಾಯವಾದಿ ಇಸ್ಮಾಯಿಲ್ ನೆಲ್ಯಾಡಿ ಸೇರಿದಂತೆ ಹಲವು ಮಂದಿ ಆಗಮಿಸಿ ಕ್ರಿಕೆಟ್ ಪಂದ್ಯಾಟಕ್ಕೆ ಶುಭಹಾರೈಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.