ರಾಮಕುಂಜ ಪ.ಪೂ.ಕಾಲೇಜಿನಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದಂಗಳವರ ದ್ವಿತೀಯ ಸಮಾರಾಧನಾ ಪುಣ್ಯ ಸಂಸ್ಮರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ರಾಮಕುಂಜ: ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳವರ ದ್ವಿತೀಯ ಸಮಾರಾಧನಾ ಅಂಗವಾಗಿ ಪುಣ್ಯ ಸಂಸ್ಮರಣೆಯು ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜ.5ರಂದು ನಡೆಯಿತು.


ಕಾಲೇಜಿನ ಹಿರಿಯ ಉಪನ್ಯಾಸಕ ಹರಿನಾರಾಯಣ ಆಚಾರ್ಯರವರು ಶ್ರೀಗಳವರ ಸಂಸ್ಮರಣಾ ಭಾಷಣವನ್ನು ಮಾಡಿ, ಶ್ರೀಗಳು ತಮ್ಮ ಹುಟ್ಟೂರಾದ ರಾಮಕುಂಜದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಕುರಿತಾಗಿ ಮತ್ತು ವಿದ್ಯಾರ್ಥಿಗಳೊಂದಿಗಿನ ಶ್ರೀಗಳವರ ಭಾಂದವ್ಯದ ಕುರಿತಾದ ನೆನಪುಗಳನ್ನು ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ ಕೆ.,ರವರು ಮಾತನಾಡಿ, ಶ್ರೀ ವಿಶ್ವೇಶತೀರ್ಥರು ಹುಟ್ಟಿದ ಊರಿನಲ್ಲಿ ಇರುವ, ಅವರೇ ಮುನ್ನಡೆಸಿ ಮತ್ತು ಈಗ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರು ಮುನ್ನಡೆಸುತ್ತಿರುವ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವುದು ವಿದ್ಯಾರ್ಥಿಗಳ ಸೌಭಾಗ್ಯವೇ ಸರಿ. ಇಂತಹ ಸಮಾಜಮುಖಿ ಕಾರ್ಯಗಳನ್ನು ಮಾಡಿ ಲೋಕ ಕಲ್ಯಾಣಕ್ಕೆ ಮುನ್ನುಡಿ ಹಾಕಿದ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಗಳವರನ್ನು ಪ್ರತಿ ದಿನವೂ ಸ್ಮರಿಸುವುದು ನಮ್ಮ ಕರ್ತವ್ಯವೂ ಹೌದು” ಎಂದು ಹೇಳಿದರು. ನಂತರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ-ಉಪನ್ಯಾಸಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.