ವಿಟ್ಲ: ಮದುವೆ ಮನೆಯಲ್ಲಿ ಮದುಮಗನಿಗೆ ಕೊರಗಜ್ಜನನ್ನು ಹೋಲುವ ವೇಷ ಧರಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ – ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ನಡೆದ ಘಟನೆ

0

ವಿಟ್ಲ: ಮುಸ್ಲೀಂ ಸಮುದಾಯದ ಮನೆಯೊಂದರ ಮದುವೆ ಸಮಾರಂಭದ ಔತಣ ಕೂಟದಲ್ಲಿ ಮದುಮಗನೇ ಕೊರಗಜ್ಜನ ಮಾದರಿಯ ವೇಷ ಧರಿಸಿ ಕುಣಿದ ವೀಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಇದು ವ್ಯಾಪಕ ಟೀಕೆಗೆ ಕಾರಣವಾಗಿದೆ.

ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮಗಳ ಮದುವೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ಉಪ್ಪಳ ಸಮೀಪದ ಯುವಕನ ಜೊತೆ ನಡೆದಿತ್ತು. ವಿವಾಹ ಸಮಾರಂಭ ಮಧ್ಯಾಹ್ನ ನಡೆದಿತ್ತು. ಅದೇ ದಿನ ರಾತ್ರಿ ಮುಸ್ಲಿಂ ಸಂಪ್ರದಾಯದಂತೆ ವರ ತನ್ನ 50ಕ್ಕೂ ಹೆಚ್ಚು ಸ್ನೇಹಿತರೊಂದಿಗೆ ವಧುವಿನ ಮನೆಗೆ ಔತಣಕೂಟಕ್ಕೆ ಆಗಮಿಸಿದ್ದರು. ರಾತ್ರಿ ವೇಳೆ ಆಗಮಿಸಿದ ವರನ ಬಳಗದವರು ವಧುವಿನ ಮನೆ ಪಕ್ಕದ ರಸ್ತೆಯಲ್ಲಿ ವರನಿಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮೆರವಣಿಗೆಯಲ್ಲಿ ಕರೆತಂದಿದ್ದರು. ಬಳಿಕ ಮದುಮಗನಿಗೆ ಬಣ್ಣ ಹಚ್ಚಿ ಕೊರಗಜ್ಜನನ್ನು ಹೋಲುವ ವೇಶ ಧರಿಸಿ ಕುಣಿಸಿದ ದೃಶ್ಯವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದ್ದು, ಸಾರ್ವಜನಿಕರ ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿದೆ.

ಬಳಿಕದ ಬೆಳವಣಿಗೆಯಲ್ಲಿ ಘಟನೆಯ ಬಗ್ಗೆ ಆಕ್ರೋಷ ವ್ಯಕ್ತಪಡಿಸಿರುವ ಮುಸ್ಲಿಂ ಸಮಯದಾಯದ ವ್ಯಕ್ತಿಯೋರ್ವರದ್ದೆನ್ನಲಾದ ಆಡಿಯೋ ಕೂಡ ಸಾಮಾಜಿಕ‌ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಸೇಸಪ್ಪ ಬೆದ್ರಕಾಡು ರವರು ಘಟನೆ ನಡೆದಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬಂದ ವೀಡಿಯೋ ಕಂಡು ಗೊತ್ತಾಗಿದೆ. ಈ ಬಗ್ಗೆ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ. ಪೊಲೀಸ್ ಇಲಾಖೆಗೂ ಮಾಹಿತಿ ನೀಡಿದ್ದೇನೆ ಎಂದರು.

ಈ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ ಎಂದು ವಿಟ್ಲ ಠಾಣಾ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

https://youtu.be/vPqSntc66So

LEAVE A REPLY

Please enter your comment!
Please enter your name here