ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಆಶ್ಲೇಷ ಬಲಿ, ತುಲಾಭಾರ ಸೇವೆ,  ರಾತ್ರಿ ಪಂಚಮಿ ಬಲಿ ಉತ್ಸವ, ವಸಂತಕಟ್ಟೆ ಪೂಜೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ವಿಟ್ಲ:  ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ  ಜ.8ರ ವರೆಗೆ ನಡೆಯಲಿರುವ ಜಾತ್ರೋತ್ಸವದ ಎರಡನೇ ದಿನವಾದ ಜ.7ರಂದು ಬೆಳಿಗ್ಗೆ  ಅರ್ಧ ಏಕಾಹ ಭಜನೆ ಆರಂಭಗೊಂಡಿತು. ಬಳಿಕ ಆಶ್ಲೇಷ ಬಲಿ, ತುಲಾಭಾರ ಸೇವೆ ನಡೆಯಿತು. ಮದ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಪಂಚಮಿ ಬಲಿ ಉತ್ಸವ, ವಸಂತಕಟ್ಟೆ ಪೂಜೆ ನಡೆಯಲಿದೆ.

 

 

ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸುರೇಶ್ ಕೆ.ಎಸ್. ಮುಕ್ಕುಡ, ಪಿ. ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು, ರಮೇಶ್ ಭಟ್ ಬಂಡಾರಮನೆ, ಪ್ರಪುಲ್ಲ ಚಂದ್ರ ಪಿ.ಜಿ. ಕೋಲ್ಪೆ,  ವ್ಯವಸ್ಥಾಪನಾ ಸಮಿತಿ ಸದಸ್ಯ ವಿಜಯಕುಮಾರ ಗೌಡ ಸೂರ್ಯ, ಚಂದ್ರಶೇಖರ ಕಂಬಳಿ ಅರ್ಕೆಚ್ಚಾರು, ದೇಜಪ್ಪ ಕೋಲ್ಪೆ,  ವಿ.ಕೆ.ಕುಟ್ಟಿ ಉರಿಮಜಲು, ಉಷಾ ಮುಂಡ್ರಬೈಲು,‌ ಶಶಿಪ್ರಭಾ ಮಿತ್ತೂರು  ಮೊದಲಾದವರು ಉಪಸ್ಥಿತರಿದ್ದರು. 

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.