ಪುತ್ತೂರು: ವಾರಂತ್ಯದ ಕರ್ಫ್ಯೂಗೆ ಸಂಬಂಧಿಸಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸ ಪೂಜೆಯಲ್ಲಿ ನಡೆಯುವ ಮಂಗಳಾರತಿ ಸಂದರ್ಭದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಈಗಿನ ಆದೇಶದಂತೆ ದೇವಳದಲ್ಲಿ ಬೆಳಗ್ಗಿನ ಜಾವ ನಡೆಯುವ ಧನುರ್ಮಾಸ ಪೂಜೆಯ ಸಂದರ್ಭ ನಡೆಯುವ ಮಂಗಳಾರತಿಯಲ್ಲಿ ಶ್ರೀ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುವುದು. ಭಕ್ತರು ಸ್ಯಾನಿಟೈಸರ್ ಬಳಸಿ, ಮಾಸ್ಕ್ ಧರಿಸಿ ಸರದಿ ಸಾಲಿನಲ್ಲಿ ಬಂದು ದೇವರ ದರ್ಶನ ಮಾಡುವಂತೆ ಕೇಶವ ಪ್ರಸಾದ್ ಮುಳಿಯ ಅವರು ತಿಳಿಸಿದ್ದಾರೆ.
Home ಚಿತ್ರ ವರದಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನು ಪೂಜೆ ಸಂದರ್ಭ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇದೆ –...