ಮರಕ್ಕಡ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ, ನಿವೃತ್ತ ಸೈನಿಕರಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಕಾಯಿಮಣ ಮರಕ್ಕಡ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಮತ್ತು ನಿವೃತ್ತ ಸೈನಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮವನ್ನು ಬೆಳಂದೂರು ಗ್ರಾ.ಪಂ, ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿ ಅಧ್ಯಕ್ಷೆ ಯಶ್ಮಿತಾ ಮರಕ್ಕಡ ವಹಿಸಿದ್ದರು. ಬೆಳಂದೂರು ಗ್ರಾ.ಪಂ. ಸದಸ್ಯರಾದ ಪಾರ್ವತಿ ಮರಕ್ಕಡ, ವಿಠಲ ಗೌಡ ಅಗಳಿ, ಕಾಣಿಯೂರು ಕ್ಲಸ್ಟರ್ ಸಿಆರ್‌ಸಿ ಯಶೋಧ, ಮರಕ್ಕಡ ಕಲ್ಲಮಾಡ ಉಳ್ಳಾಕುಲು ಯುವಕ ಮಂಡಲದ ಅಧ್ಯಕ್ಷ ಪುರುಷೋತ್ತಮ ಗೌಡ ಬೈತ್ತಡ್ಕ, ಆಶಾ ಕಾರ್ಯಕರ್ತೆ ಲಲಿತಾ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಿವೃತ್ತ ಸೈನಿಕರಾದ ರಾಮಕೃಷ್ಣ ಪೂಜಾರಿ ಮರಕ್ಕಡರವರನ್ನು ಸನ್ಮಾನಿಸಲಾಯಿತು. ಸ್ತ್ರೀಶಕ್ತಿ ಸಂಘದ ಸದಸ್ಯರು ಹಾಗೂ ಅಂಗನವಾಡಿ ಕೇಂದ್ರದ ಹಿರಿಯ ವಿದ್ಯಾರ್ಥಿಗಳು ಅಂಗನವಾಡಿ ಕೇಂದ್ರಕ್ಕೆ ಕೊಡುಗೆಯಾಗಿ ನೀಡಿದ ೧೦ ಚಯರ್, ದೀಪ, ಟೇಬಲ್ ಹಾಗೂ ಟೀಪಾಯಿಯನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಲಾಯಿತು. ಅಂಗನವಾಡಿ ಕೇಂದ್ರದ ಮಕ್ಕಳು ಪ್ರಾರ್ಥಿಸಿದರು. ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸರೋಜಿನಿ ಸ್ವಾಗತಿಸಿ, ರವಿರಾಜ್ ಡಿ.ಜಿ ವಂದಿಸಿದರು. ಪುರುಷೋತ್ತಮ ಗೌಡ ಬೈತಡ್ಕ ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಸಹಾಯಕಿ ಜಯಶ್ರೀ ಸಹಕರಿಸಿದರು. ಬಳಿಕ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.