ಸುಳ್ಯ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

0

ವೀರ ಸಾವರ್ಕರ್ ಕಿರುಹೊತ್ತಿಗೆ ಬಿಡುಗಡೆ – ಬಹುಮಾನ ವಿತರಣೆ

ಸುಳ್ಯ ಶ್ರೀ ಸಿದ್ಧಿವಿನಾಯಕ ಸೇವಾ ಸಮಿತಿ, ಸಾರ್ವಜನಿಕ ಶ್ರೀ ದೇವತಾರಾಧನಾ ಸಮಿತಿ ಆಶ್ರಯದಲ್ಲಿ ನಡೆಯುತ್ತಿರುವ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಸಮಿತಿ ಅಧ್ಯಕ್ಷ ಸೋಮನಾಥ ಕೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಮುಖ್ಯ ಅತಿಥಿಗಳಾಗಿ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಮೊಕ್ತೇಸರ ಎಅ.ಹರಪ್ರಸಾದ್ ತುದಿಯಡ್ಕ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ‌ ವಿನಯಕುಮಾರ್ ಕಂದಡ್ಕ, ಜೆ.ಸಿ.ಐ.ರಾಷ್ಟ್ರೀಯ ತರಬೇತುದಾರ ಕೃಷ್ಣ ಮೋಹನ್ ಪಿ.ಎಸ್, ಸಮಿತಿ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಕೆ.ಎಸ್,ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಲತಾಮಧುಸೂದನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಸಮಿತಿ ವತಿಯಿಂದ ಮುದ್ರಿಸಲ್ಪಟ್ಟ ವಿನಾಯಕ ದಾಮೋದರ ಸಾವರ್ಕರ್ ರವರ ಕಿರುಹೊತ್ತಿಗೆಯನ್ನು ವಿನಯಕುಮಾರ್ ಕಂದಡ್ಕ ರವರು ಬಿಡುಗಡೆ ಗೊಳಿಸಿದರು.ಗಣೇಶೋತ್ಸವದ ಪ್ರಯುಕ್ತ ಹಮ್ಮಿಕೊಂಡ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶ್ರೀಮತಿ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮ ನಿರೂಪಿಸಿದರು. ಬಳಿಕ ವಿವೇಕಾನಂದ ವಿದ್ಯಾ ಸಂಸ್ಥೆ ವಿನೋಬನಗರ ಜಾಲ್ಸೂರು ಇದರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು.

LEAVE A REPLY

Please enter your comment!
Please enter your name here