ಹಾಲೆಮಜಲು : ಗಣೇಶ ಚತುರ್ಥಿ ಪ್ರಯುಕ್ತ ವಿವಿಧ ಸ್ಪರ್ಧೆ

0

 

ಹಾಲೆಮಜಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಆದರ್ಶ ಯುತ್ ಕ್ಲಬ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ, ನಾಲ್ಕೂರು ರಾಷ್ಟ್ರ ಸೇವಿಕಾ ಸಮಿತಿ, ಹಾಲೆಮಜಲು ಅಂಗನವಾಡಿ ಕೇಂದ್ರ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ವಿವಿಧ ಸ್ಪರ್ಧೆಗಳು ನಡೆಯಿತು. ಶ್ರೀ ದುರ್ಗಾ ಶಕ್ತಿ ಭಜನಾ ಸಮಿತಿ ಹಾಲೆಮಜಲು ಇದರ ಸದಸ್ಯರು ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.


ಈ ಸಂದರ್ಭದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಪವಿತ್ರ ಕುಕ್ಕುಜೆ, ಶಾಲಾ ಮುಖ್ಯೋಪಾಧ್ಯಾಯನಿ ಜಯಂತಿ ವಾಗ್ಲೆ, ಆದರ್ಶ ಯೂತ್ ಕ್ಲಬ್ ಅಧ್ಯಕ್ಷ ದಿನೇಶ್ ಹಾಲೆಮಜಲು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪಾಡಿ, ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ಸತೀಶ್ ಬಂಬುಳಿ ಹಾಗೂ ರಾಷ್ಟ್ರ ಸೇವಿಕ ಸಮಿತಿ ಸದಸ್ಯರು, ಊರಿನವರು, ಮಕ್ಕಳು, ಶಿಕ್ಷಕರು ಉಪಸಿತರಿದ್ದರು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಸಭಾಧ್ಯಕ್ಷತೆಯನ್ನು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಪವಿತ್ರ ಕುಕ್ಕುಜೆ ವಹಿಸಿದ್ದರು. ವೇದಿಕೆಯಲ್ಲಿ ಆದರ್ಶ ಯೂಥ್ ಕ್ಲಬ್ ಅಧ್ಯಕ್ಷ ದಿನೇಶ್ ಹಾಲೆಮಜಲು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕ ಸತೀಶ ಬಂಬುಳಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ದುಗ್ಗಪ್ಪ ಗೌಡ ಕುಳ್ಳಂಪಾಡಿ, ಶಾಲಾ ಎಸ್‌ಡಿಎಮ್‌ಸಿ ಉಪಾಧ್ಯಕ್ಷ ಮೋಹನ್ ಬಾಳಕಜೆ ಉಪಸಿತರಿದ್ದರು. ಶಾಲಾ ಮುಖ್ಯ ಉಪಾಧ್ಯಾಯಣಿ ಜಯಂತಿ ವಾಗ್ಲೆ ಸ್ವಾಗತಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಮಧ್ಯಾಹ್ನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಿಂದ ಅನ್ನದಾನದ ವ್ಯವಸ್ಥೆ ಕಲ್ಪಿಸಿದ್ದರು. ಸೇವಾ ಪ್ರತಿನಿಧಿ ಹರಿಶ್ಚಂದ್ರ ಕುಳ್ಳಂಪಾಡಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here