ಜ.12-18: ಕಾವು ನನ್ಯ ತುಡರ್ ಯುವಕ ಮಂಡಲದ ನೇತೃತ್ವದಲ್ಲಿ ಸ್ವಾಮಿ ವಿವೇಕಾನಂದ ಜನ್ಮದಿನದ ಪ್ರಯುಕ್ತ “ರಾಷ್ಟ್ರೀಯ ಯುವ ಸಪ್ತಾಹ”

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  •  ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವ
  • ಏಳು ದಿನಗಳಲ್ಲಿ ವಿವಿಧ ಕಾರ್ಯಕ್ರಮ

ಕಾವು: ಜಿಲ್ಲಾ ಪ್ರಶಸ್ತಿ ಪುರಸ್ಕೃತ ಕಾವು ನನ್ಯ ತುಡರ್ ಯುವಕ ಮಂಡಲದ ನೇತೃತ್ವದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವು ಜ.12ರಿಂದ ಜ.18ರವರೆಗೆ ನಡೆಯಲಿದೆ. ಏಳು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿರುವ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮವು ನೆಹರು ಯುವ ಕೇಂದ್ರ ಮಂಗಳೂರು, ಅರಿಯಡ್ಕ ಗ್ರಾಮ ಪಂಚಾಯತ್, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ, ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ, ಆನಂದಾಶ್ರಮ ಸೇವಾ ಟ್ರಸ್ಟ್, ಕೆ.ವಿ.ಜಿ ದಂತ ಮಹಾವಿದ್ಯಾಲಯ ಸುಳ್ಯ, ಬುಶ್ರಾ ವಿದ್ಯಾಸಂಸ್ಥೆ ಕಾವು, ತುಡರ್ ಮಹಿಳಾ ಮಂಡಲ ನನ್ಯ-ಕಾವು ಇದರ ಸಹಭಾಗಿತ್ವದಲ್ಲಿ ನಡೆಯಲಿದೆ.

ಜ.12ರಂದು ಉದ್ಘಾಟನೆ:
ಜ.12ರಂದು ಬೆಳಿಗ್ಗೆ 10 ಗಂಟೆಗೆ ಕಾವು ಬುಶ್ರಾ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ಸಪ್ತಾಹದ ಉದ್ಘಾಟನೆ ಮತ್ತು ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ನಡೆಯಲಿದೆ. ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿಯವರು ಯುವ ಸಪ್ತಾಹಕ್ಕೆ ಚಾಲನೆ ನೀಡಲಿದ್ದಾರೆ. ಕಾವು ಬುಶ್ರಾವಿದ್ಯಾಸಂಸ್ಥೆಯ ಅಧ್ಯಕ್ಷ ಅಬ್ದುಲ್ ಅಜೀಜ್‌ರವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಡಾ. ರಾಜೇಶ್ ಬೆಜ್ಜಂಗಳರವರು ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಲಿದ್ದಾರೆ. ಅರಿಯಡ್ಕ ಗ್ರಾ.ಪಂ ಉಪಾಧ್ಯಕ್ಷ ಸಂತೋಷ್ ಮಣಿಯಾಣಿ ಕುತ್ಯಾಡಿ, ಕಾವು ಬುಶ್ರಾ ವಿದ್ಯಾಸಂಸ್ಥೆಯ ಮುಖ್ಯಗುರು ಅಮರನಾಥರವರು ಮುಖ್ಯಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾವು ತುಡರ್ ಯುವಕ ಮಂಡಲದ ಅಧ್ಯಕ್ಷ ಸುನೀಲ್ ನಿಧಿಮುಂಡರವರು ಸ್ವಾಗತದೊಂದಿಗೆ ಪ್ರಸ್ತಾವನೆ ಮಾಡಲಿದ್ದಾರೆ.

ಜ.13: ಉಚಿತ ದಂತ ಚಿಕಿತ್ಸಾ ಶಿಬಿರ:
ಜ.೧೩ರಂದು ಬೆಳಿಗ್ಗೆ ಗಂಟೆ ೯.೩೦ರಿಂದ ಮಧ್ಯಾಹ್ನ ೧.೩೦ರವರೆಗೆ ಕೆ.ವಿ.ಜಿ ದಂತ ಮಹಾವಿದ್ಯಾಲಯ ಸುಳ್ಯ ಮತ್ತು ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ. ಇವರ ಸಹಯೋಗದೊಂದಿಗೆ ಕಾವು ಸಹಕಾರ ಸಂಘದ ಶಿವಸದನ ಸಭಾಭವನದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಲಿದೆ. ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೃಷ್ಣಪ್ರಸಾದ್ ಕೊಚ್ಚಿರವರು ಶಿಬಿರದ ಉದ್ಘಾಟನೆ ಮಾಡಲಿದ್ದಾರೆ. ತುಡರ್ ಯುವಕ ಮಂಡಲದ ಉಪಾಧ್ಯಕ್ಷ ಶ್ರೀಕುಮಾರ್ ಬಲ್ಯಾಯರವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಲೋಕೇಶ್ ಚಾಕೋಟೆ, ಅರಿಯಡ್ಕ ಗ್ರಾ.ಪಂ ಸದಸ್ಯ ದಿವ್ಯನಾಥ ಶೆಟ್ಟಿಯವರು ಮುಖ್ಯಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೆವಿಜಿ ದಂತ ಮಹಾವಿದ್ಯಾಲಯದ ಉಪನ್ಯಾಸಕ ಡಾ. ಹೇಮಂತ್ ಬಟ್ಟೂರು ಶಿಬಿರದ ಮಾಹಿತಿ ನೀಡಲಿದ್ದಾರೆ. ತುಡರ್ ಯುವಕ ಮಂಡಲದ ಸದಸ್ಯ ಶ್ರೀಕಾಂತ್ ಗೌಡ ಕಾರ್ಯಕ್ರಮ ಸಂಯೋಜನೆ ಮಾಡಲಿದ್ದಾರೆ. ಶಿಬಿರದಲ್ಲಿ ಹಲ್ಲಿನ ತಪಾಸಣೆ, ಸ್ವಚ್ಛತೆ, ಹುಳುಕು ಹಾಗೂ ಅಲುಗಾಡುವ ಹಲ್ಲುಗಳ ಕೀಳುವಿಕೆ, ಹಲ್ಲುಗಳ ಫಿಲ್ಲಿಂಗ್, ಕೃತಕ ದಂತ ಜೋಡಣೆ ಇತ್ಯಾದಿ ಚಿಕಿತ್ಸೆಗಳು ಲಭ್ಯವಿದೆ.

ಜ.14: ಕುಟುಂಬ ಮಿಲನ ಕಾರ್ಯಕ್ರಮ:
ಜ.೧೪ರಂದು ಬೆಳಿಗ್ಗೆ ಗಂಟೆ ೧೦ರಿಂದ ಮಧ್ಯಾಹ್ನ ೧ರವರೆಗೆ ನನ್ಯ ಜನಮಂಗಲ ಸಭಾಭವನದಲ್ಲಿ ಕುಟುಂಬ ಮಿಲನ ಕಾರ್ಯಕ್ರಮ ನಡೆಯಲಿದೆ. ದಂಪತಿಗಳು ಮಾತ್ರ ಭಾಗವಹಿಸಲಿರುವ ಕುಟುಂಬ ಮಿಲನ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಮಂಗಳೂರು ವಿಭಾಗದ ಕುಟುಂಬ ಪ್ರಭೋಧನ್‌ನ ಸಂಯೋಜಕ ಗಜಾನನ ಪೈ ಯವರು ಉಪಸ್ಥಿತಿ ವಹಿಸಲಿದ್ದಾರೆ. ತುಡರ್ ಯುವಕ ಮಂಡಲದ ಮಾಜಿ ಅಧ್ಯಕ್ಷ ಚಂದ್ರಶೇಖರ ಬಲ್ಯಾಯ ಕಾರ್ಯಕ್ರಮ ಸಂಯೋಜನೆ ಮಾಡಲಿದ್ದಾರೆ,

ಜ.15: ಸ್ವ-ಉದ್ಯೋಗ, ಕಾನೂನು ಮಾಹಿತಿ ಕಾರ್ಯಕ್ರಮ:
ಜ.೧೫ರಂದು ಬೆಳಿಗ್ಗೆ ತುಡರ್ ಮಹಿಳಾ ಮಂಡಲದ ಆಶ್ರಯದಲ್ಲಿ ಸ್ವ-ಉದ್ಯೋಗ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮವು ಮದ್ಲ ನಿನಾದ ಸಭಾಂಗಣದಲ್ಲಿ ನಡೆಯಲಿದೆ. ತುಡರ್ ಮಹಿಳಾ ಮಂಡಲದ ಅದ್ಯಕ್ಷೆ ವಿಜಯ ಪಿಲಿಪಂಜರವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಅರಿಯಡ್ಕ ಗ್ರಾ.ಪಂ ಪಿಡಿಓ ಪದ್ಮ ಕುಮಾರಿಯವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರೋಹಿಣಿ ರಾಘವ ಆಚಾರ್ಯ, ವಕೀಲ ತೇಜಸ್ ಕೊಂಬೆಟ್ಟುರವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಲಿದ್ದಾರೆ. ಅರಿಯಡ್ಕ ಗ್ರಾ.ಪಂ ಸದಸ್ಯೆ ಹೇಮಾವತಿ ಚಾಕೋಟೆಯವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಜ.16: ವಿಷಯಾಧಾರಿತ ಶಿಕ್ಷಣ ಜಾಗೃತಿ ಕಾರ್ಯಕ್ರಮ:
ಜ.16ರಂದು ಬೆಳಿಗ್ಗೆ ಗಂಟೆ ೯ರಿಂದ ಮದ್ಲ ನಿನಾದ ಸಭಾಂಗಣದಲ್ಲಿ ವಿಷಯಾಧಾರಿತ ಶಿಕ್ಷಣ ಜಾಗೃತಿ ಕಾರ್ಯಕ್ರಮ ನಡೆಯಲಿದೆ. ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಅಧ್ಯಕ್ಷ ರಮೇಶ್ ರೈ ಸಾಂತ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ನಿವೃತ್ತ ಮುಖ್ಯಗುರು ಗಿರಿಶಂಕರ ಸುಲಾಯರವರು ಸಂಪನ್ಮೂಲ ವ್ಯಕ್ತಿಯಾಗಿ ನಾಯಕತ್ವ ಮತ್ತು ಸಂಘಟನೆ ವಿಷಯದಲ್ಲಿ ಉಪನ್ಯಾಸ ನೀಡಲಿದ್ದಾರೆ. ತುಡರ್ ಯುವಕ ಮಂಡಲದ ಅಧ್ಯಕ್ಷ ಸುನೀಲ್ ನಿಧಿಮುಂಡ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಅರಿಯಡ್ಕ ಗ್ರಾ.ಪಂ ಸದಸ್ಯರಾದ ಅನಿತಾ ಆಚಾರಿಮೂಲೆ, ಹರೀಶ್ ರೈ ಜಾರತ್ತಾರು, ಸುದ್ದಿಬಿಡುಗಡೆಯ ವರದಿಗಾರ ಸಿ.ಶೇ ಕಜೆಮಾರ್‌ರವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ತುಡರ್ ಯುವಕ ಮಂಡಲದ ಮಾಜಿ ಅಧ್ಯಕ್ಷ ಗಂಗಾಧರ ನಾಯ್ಕರವರು ಕಾರ್ಯಕ್ರಮ ಸಂಯೋಜನೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಯುವ ಸಪ್ತಾಹದ ಕುರಿತಾಗಿ ವಿವಿಧ ಸ್ಪರ್ಧೆಗಳು ನಡೆಯಲಿದೆ.

ಜ.17: ಭಜನಾ ಸತ್ಸಾಂಗ-ತರಬೇತಿ
ಜ.17ರಂದು ಮಧ್ಯಾಹ್ನ ಗಂಟೆ 3ರಿಂದ ಸಂಜೆ ಗಂಟೆ 5.30ರವರೆಗೆ ತುಡರ್ ಭಜನಾ ಸಂಘ ಮತ್ತು ತುಡರ್ ಮಾತೃ ಮಂಡಳಿಯವರ ಸಹಭಾಗಿತ್ವದಲ್ಲಿ ನನ್ಯ ಜನಮಂಗಲ ಸಭಾಭವನದಲ್ಲಿ ಭಜನಾ ಸತ್ಸಾಂಗ ಮತ್ತು ತರಬೇತಿ ನಡೆಯಲಿದೆ. ದಾಸ ಸಾಹಿತ್ಯ ಸಂಕೀರ್ತನಕಾರ ಹಾಗೂ ಪ್ರಚಾರಕರಾದ ರಾಮಕೃಷ್ಣ ಕಾಟುಕುಕ್ಕೆಯವರು ಭಜನಾ ತರಬೇತಿ ನೀಡಲಿದ್ದಾರೆ. ತುಡರ್ ಭಜನಾ ಸಂಘದ ಗೌರವಾಧ್ಯಕ್ಷ ರಾಮಣ್ಣ ನಾಯ್ಕ ಆಚಾರಿಮೂಲೆ ಕಾರ್ಯಕ್ರಮ ಸಂಯೋಜನೆ ಮಾಡಲಿದ್ದಾರೆ.

ಜ.18೮: ಉಚಿತ ನೇತ್ರ ಚಿಕಿತ್ಸಾ ಶಿಬಿರ:
ಜ.18ರಂದು ಬೆಳಿಗ್ಗೆ ಗಂಟೆ 9.30ರಿಂದ ಮಧ್ಯಾಹ್ನ 12.30ರವರೆಗೆ ಆನಂದಾಶ್ರಮ ಸೇವಾ ಟ್ರಸ್ಟ್ ಮತ್ತು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ ಇವರ ಸಹಭಾಗಿತ್ವದಲ್ಲಿ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ ನಡೆಯಲಿದೆ. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಶಿಬಿರ ಉದ್ಘಾಟಿಸಲಿದ್ದಾರೆ. ತುಡರ್ ಯುವಕ ಮಂಡಲದ ಮಾಜಿ ಅಧ್ಯಕ್ಷ ಭಾಸ್ಕರ ಬಲ್ಯಾಯ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಆನಂದಾಶ್ರಮ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ಡಾ. ಗೌರಿ ಪೈಯವರು ಶಿಬಿರದ ಮಾಹಿತಿ ನೀಡಲಿದ್ದಾರೆ. ಅರಿಯಡ್ಕ ಗ್ರಾ.ಪಂ ಸದಸ್ಯ ಮೋನಪ್ಪ ಪೂಜಾರಿ, ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಓ ಕೇಶವಮೂರ್ತಿ ಪಿ.ಜಿರವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ತುಡರ್ ಯುವಕ ಮಂಡಲದ ಮಾಜಿ ಅಧ್ಯಕ್ಷ ಭಾಸ್ಕರ ಬಲ್ಯಾಯರವರು ಕಾರ್ಯಕ್ರಮ ಸಂಯೋಜನೆ ಮಾಡಲಿದ್ದಾರೆ. ಶಿಬಿರದಲ್ಲಿ ಕಣ್ಣಿನ ಪರೀಕ್ಷೆ, ಚಿಕಿತ್ಸೆ ಮತ್ತು ಸಲಹೆ ಹಾಗೂ ಆನಂದಾಶ್ರಮ ಸೇವಾ ಟ್ರಸ್ಟ್‌ನ ವತಿಯಿಂದ ಉಚಿತವಾಗಿ ಲಭ್ಯ ಕನ್ನಡಕಗಳನ್ನು ವಿತರಿಸಲಿದ್ದಾರೆ.

ಸಮಾರೋಪ:
ಜ.೧೮ರಂದು ಸಂಜೆ ನನ್ಯ ಜನಮಂಗಲ ಸಭಾಭವನದಲ್ಲಿ ರಾಷ್ಟ್ರೀಯ ಯುವ ಸಪ್ತಾಹದ ಸಮಾರೋಪ ಸಮಾರಂಭ ನಡೆಯಲಿದೆ. ಅರಿಯಡ್ಕ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಬಾಲಸುಬ್ರಹ್ಮಣ್ಯರವರು ಸಭಾಧ್ಯಕ್ಷತೆ ವಹಿಸಿ, ಪುತ್ತೂರು ಶಾಸಕ ಸಂಜೀವ ಮಠಂದೂರುರವರು ಸಮಾರೋಪ ಭಾಷಣ ಮಾಡಲಿದ್ದಾರೆ. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಬಹುಮಾನ ವಿತರಣೆ ಮಾಡಲಿದ್ದಾರೆ. ತುಡರ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷ ಸುಬ್ರಾಯ ಬಲ್ಯಾಯ ಉಪಸ್ಥಿತಿ ವಹಿಸಲಿದ್ದಾರೆ. ಈ ಎಲ್ಲಾ ಕಾರ್ಯಕ್ರಮಗಳ ಪ್ರಯೋಜನ ಪಡೆದುಕೊಂಡು ಯುವ ಸಪ್ತಾಹವನ್ನು ಯಶಸ್ವಿಗೊಳಿಸುವಂತೆ ತುಡರ್ ಯುವಕ ಮಂಡಲದ ಪ್ರಕಟಣೆ ತಿಳಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.