ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ

0

 

 

ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಆ.೩೧ ರಂದು ವಿಶೇಷ ಪೂಜೆ ನಡೆಯಿತು. ದೇವಳದ ಪ್ರಧಾನ ಅರ್ಚಕ ಶ್ರೀಹರಿ ಕುಂಜೂರಾಯರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳೊಂದಿಗೆ ವಿಶೇಷ ಗಣಹೋಮ ಮತ್ತು ಶ್ರೀದೇವಿಗೆ ಅಲಂಕಾರ ಸೇವೆ ಕಾರ್ಯಕ್ರಮ ನಡೆಯಿತು.

ಬೆಳಿಗ್ಗೆ ಗಣಪತಿ ಹವನ ಮಹಾಪೂಜೆ ಬಳಿಕ ಮಧ್ಯಾಹ್ನ ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ ನಡೆಯಿತು. ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಿತು. ಅಪರಾಹ್ನ ಪ್ರತಿ ವರ್ಷದಂತೆ ಅದ್ದೂರಿಯಾಗಿ ನವರಾತ್ರಿ ಉತ್ಸವ ನಡೆಸುವುದರ ಬಗ್ಗೆ ಪೂರ್ವಭಾವಿ ಸಭೆಯು ಅಧ್ಯಕ್ಷರಾದ ವಸಂತ ನಡುಬೈಲು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಎಲ್ಲಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here