ಅಲೆಕ್ಕಾಡಿ : 22ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ: ಧಾರ್ಮಿಕ ಸಭೆ

0

 

ಮುರುಳ್ಯ ಗ್ರಾಮದ ಅಲೆಕ್ಕಾಡಿ ಶಾಲಾ ವಠಾರದಲ್ಲಿ ೨೨ನೇ ವರ್ಷದ ಶ್ರೀ ಗಣೇಶೋತ್ಸವ ಆ.೩೧ ರಂದು ನಡೆಯಿತು. ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ನಡೆದು ಬಹುಮಾನ ವಿತರಣೆ ನಡೆಯಿತು. ಶಾಲಾ ಎಸ್ ಡಿಎಂಸಿ ಅಧ್ಯಕ್ಷೆ ಮಧು ಪಿ.ಆರ್. ಬಹುಮಾನ ವಿತರಿಸಿದರು.
ನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಬಾಲಕೃಷ್ಣ ನಾವೂರು ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ ಹಾಗೂ ಮುಖ್ಯಶಿಕ್ಷಕ ಗಿರಿಶಂಕರ ಸುಲಾಯ ಧಾರ್ಮಿಕ ಉಪನ್ಯಾಸ ನೀಡಿದರು. ಅಲೆಕ್ಕಾಡಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶಶಿಕಲಾ ಮತ್ತು ಎಣ್ಮೂರು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಜಯಂತ್ ಕೆ. ಮುಖ್ಯ ಅತಿಥಿಗಳಾಗಿದ್ದರು. ಬಳಿಕ ಶ್ರೀ ದೇವರ ಶೋಭಾ ಯಾತ್ರೆಯು ಅಲೆಕ್ಕಾಡಿ ಪೇಟೆ, ಕುಕ್ಕಟ್ಟೆ, ಶಾಂತಿನಗರ ಪೇಟೆ, ರಾಗಿಪೇಟೆ, ಬೊಬ್ಬೆಕೇರಿ ಮಾರ್ಗವಾಗಿ ಸಾಗಿ ಬೊಬ್ಬೆಕೇರಿ ಹೊಳೆಯಲ್ಲಿ ಜಲಸ್ತಂಭನವಾಯಿತು.
ಶಿಕ್ಷಕ ಬಾಲಕೃಷ್ಣ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಸುಮಂತು ವಂದಿಸಿದರು.

 

LEAVE A REPLY

Please enter your comment!
Please enter your name here