ಕೊರಗಜ್ಜ ದೈವಕ್ಕೆ ಅವಮಾನ : ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸಂಸದ ನಳಿನ್ ಸೂಚನೆ

0

ಮಂಗಳೂರು : ದ.ಕ. ಜಿಯ ಸಾಲೆತ್ತೂರಿನಲ್ಲಿ ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ಹಿಂದೂಗಳ ಆರಾಧ್ಯ ದೈವವಾದ ಕೊರಗಜ್ಜನ ವೇಷ ಹಾಕಿ ಅಪಹಾಸ್ಯ ಮಾಡಿರುವ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ರವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ಇಂತಹ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ದೈವವನ್ನು ಅವಮಾನಿಸಿದ್ದು ಭಕ್ತರನ್ನು ನಿಂದಿಸಿದಂತಾಗಿದೆ.ಪೊಲೀಸರು ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಕರಾವಳಿಯಲ್ಲಿ ಶಾಂತಿ ಕದಡಲು ದೇಶದ್ರೋಹಿ ಸಂಘಟನೆಗಳು ಪ್ರಯತ್ನ ನಡೆಸಿದ್ದು ಬಿಜೆಪಿ ಸರ್ಕಾರ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಂಸದರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here