ಕೊರಗಜ್ಜ ಸ್ವಾಮಿಗೆ ಅಪಮಾನ – ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

0

ಪುತ್ತೂರು: ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಅಗರಿಯಲ್ಲಿ ಸ್ವಾಮಿ ಕೊರಗಜ್ಜನ ವೇಷ ಧರಿಸಿ ದೈವ ಭಕ್ತರ ಭಾವನೆಗೆ ಅಪಮಾನ ಮಾಡಿರುವ ಮುಸ್ಲಿಂ ವರ ಮತ್ತು ಇದಕ್ಕೆ ಕುಮ್ಮಕ್ಕು ನೀಡಿದ ಇದರ ಹಿಂದಿರುವ ಹಾಗು ಷಡ್ಯಂತ್ರ ನಡೆಸಿದ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ದ.ಕ. ಮತ್ತು ಉಡುಪಿ ಜಿಲ್ಲೆಗಳ 1 ಸಾವಿರ ಶ್ರದ್ಧಾ ಕೇಂದ್ರಗಳಲ್ಲಿ ಹಿಂದೂಗಳಿಂದ ಸಾಮೂಹಿಕ ಪ್ರಾರ್ಥನೆ ನಡೆಯುವ ತೀರ್ಮಾನದಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವಹಿಂದು ಪರಿಷತ್ ವತಿಯಿಂದ ಸಾಮೂಹಿಕ ಪ್ರಾರ್ಥನೆ ಜ.11ರಂದು ನಡೆಯಿತು.

ವಿಶ್ವಹಿಂದು ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ, ನಗರ ಪ್ರಖಂಡ ಸಂಚಾಲಕ ಹರೀಶ್ ದೋಳ್ಪಾಡಿ, ನಗರ ಅಧ್ಯಕ್ಷ ಜನಾರ್ದನ ಬೆಟ್ಟ, ವಿಶಾಖ್ ಶಶಿಹಿತ್ಲು, ನಗರ ಪ್ರಖಂಡ ಸಂಚಾಲಕ ಚೇತನ್ ಬೊಳುವಾರು, ಕಾರ್ಯಕರ್ತ ಗಣೇಶ್, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮಚಂದ್ರ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here