ಪಂಜ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಉದ್ಘಾಟನಾ ಸಮಾರಂಭ

0

 

2022-23 ನೇ ಸಾಲಿನ ಪಂಜ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮವು ಕಲ್ಮಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.29  ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಸಭಾಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಮೇಶ ಕೆ. ವಹಿಸಿದರು. ಕಲ್ಮಡ್ಕ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್‌ರವರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಮಕ್ಕಳ ಪ್ರಾರ್ಥನೆಯೊಂದಿಗೆ ಕಾರ್‍ಯಕ್ರಮ ನಡೆಯಿತು. ಶಾಲಾ ಮೂಖ್ಯೋಪಾಧ್ಯಾಯಿನಿ ಶ್ರೀಮತಿ ವಜ್ರಾಕ್ಷಿ ಎಂ. ಅತಿಥಿಗಳನ್ನು ಸ್ವಾಗತಿಸಿದರು.

 


ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್‌ನ ಸದಸ್ಯರುಗಳಾದ ಹರೀಶ್ ಮಾಳಪ್ಪಮಕ್ಕಿ , ಶ್ರೀಮತಿ ಮೋಹಿನಿ ಲತೇಶ್, ಲೋಕಯ್ಯ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುಬ್ರಾಯ.ವಿ. ಓಣಿಯಡ್ಕ, ಕ್ಷೇತ್ರ ಶಿಕ್ಷಣ ಸಂಯೋಜಕರಾದ ಶ್ರೀಮತಿ ಸಂಧ್ಯಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿಯಾದ ಶ್ರೀಮತಿ ಸರೋಜಿನಿ.ಕೆ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸುಬ್ರಹ್ಮಣ್ಯ, ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ.ಕೆ, ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಶ್ರೀಮತಿ ತಾರಾವತಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಹಶಿಕ್ಷಕಿಯಾದ ಶ್ರೀಮತಿ ವನಜಾಕ್ಷಿ ಬಿ.ಎಂ ರವರು ಕಾರ್ಯಕ್ರಮವನ್ನು ನಿರೂಪಿಸಿದರು. ಅತಿಥಿ ಶಿಕ್ಷಕಿಯಾದ ಕು.ಮಾಲತಿ ಡಿ.ಜಿ ಯವರು ವಂದನಾರ್ಪಣೆ ಗೈದರು.

LEAVE A REPLY

Please enter your comment!
Please enter your name here