ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಆಯ್ಕೆ

0

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಗಾಂಧಿನಗರ ಸುಳ್ಯದಲ್ಲಿ ನಡೆದ ಫುಟ್ಬಾಲ್ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಹಾಗೂ ಬಿ ಬಿ ಮೊಹಮ್ಮದ್ ಮುಫೀದ್, ಕೆ ಎ ಅಬ್ದುಲ್ ಆನ್ವಿಲ್, ಪುನೀತ್ ಬಿ ಎಸ್ ರವರು ಉತ್ತಮ ಪ್ರದರ್ಶನ ನೀಡಿದ್ದು ಸೆ.5 ರಂದು ನಡೆಯುವ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ಅತ್ಯುತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳನ್ನು ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ.ರೇಣುಕಾಪ್ರಸಾದ್ ಕೆ ವಿ , ಕಾಲೇಜಿನ ಸಿಇಓ ಡಾ. ಉಜ್ವಲ್ ಯು ಜೆ, ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದ ರಾಮಚಂದ್ರ ಹಾಗೂ ಎಲ್ಲಾ ಭೋದಕ ಭೋದಕೇತರ ವೃಂದದವರು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here