ಮೂಲ ಸೌಕರ್ಯ ಒದಗಿಸಲು ಆಗ್ರಹಿಸಿ ಕಡಬ ಪಟ್ಟಣ ಪಂಚಾಯಿತಿ ವಿರುದ್ಧ ಪ್ರತಿಭಟನೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಪಟ್ಟಣ ಪಂಚಾಯಿತಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸದೆ ಮನಬಂದಂತೆ ತೆರಿಗೆ ಸೇರಿದಂತೆ ಇನ್ನಿತರ ವ್ಯವಸ್ಥೆಯನ್ನು ಏರಿಕೆ ಮಾಡಿ ಜನತೆಗೆ ಅನ್ಯಾಯ ವೆಸಗುವ ವಿರುದ್ಧ ಕಡಬ ನಾಗರೀಕರ ಹೋರಾಟ ಸಮಿತಿಯ ನೇತೃತ್ವದಲ್ಲಿ ಕಡಬ ಪಟ್ಟಣ ಪಂಚಾಯತ್ ಎದುರಿನಲ್ಲಿ ಪ್ರತಿಭಟನೆ ನಡೆಯಿತು. ನಾಗರೀಕ ಹೋರಾಟ ಸಮಿತಿಯ ಸಂಚಾಲಕ ಜಿಲ್ಲಾ ಪರಿಷತ್ ಮಾಜಿ ಸದಸ್ಯ ಸಯ್ಯದ್ ಮೀರಾ ಸಾಹೇಬ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.


ಕಡಬ ಮೇಲಿನ ಪೇಟೆಯಿಂದ ಮೆರವಣಿಗೆಯಲ್ಲಿ ತೆರಳಿ ಪಟ್ಟಣ ಪಂ. ಕಛೇರಿ ಎದುರು ಪ್ರತಿಭಟನೆ, ಸರಕಾರಕ್ಕೆ ಹಾಗೂ ಜಿಲ್ಲಾಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಮಾತನಾಡಿ ಮನೆ ತೆರಿಗೆಯನ್ನು ಕಾನೂನು ರೀತಿಯಲ್ಲಿ ಏರಿಸದೇ ಮನಃ ಬಂದಂತೆ ಏರಿಸಿ ವಸೂಲಿ ಮಾಡುವುದು, . ೯/೧೧ ಮಾಡಿರುವುದನ್ನು ಈಗ ಪುನರ್‌ರೂಪಿ (ನಮೂನೆ-೩) ರಲ್ಲಿ ಮಾರ್ಪಡಿಸಿ ಹೆಚ್ಚಿನ À ಮೊಬಲಗನ್ನು ವಸೂಲಿ ಮಾಡುವುದು. ಅಂಗಡಿ, ವ್ಯಾಪಾರ ಲೈಸನ್ಸ್ ನವೀಕರಣ ಮಾಡಲು ಹೆಚ್ಚಿನ ದರ ವಿಧಿಸುವುದು. ಸ್ವಂತ ಮನೆ ಅಂಗಡಿ ಕಟ್ಟಡ ನಿರ್ಮಾಣಕ್ಕೆ ಕಾನೂನು ಬದ್ಧವಾಗಿ ಇರುವ ದರಕ್ಕಿಂತ ನಾಲ್ಕು ಪಟ್ಟು ಹೆಚ್ಚಿನ ದರವನ್ನು ವಸೂಲಿ ಮಾಡುವುದು. ಕುಡಿಯುವ ನೀರಿನ ಸೌಲಭ್ಯಕ್ಕೆ ೩೦ ವರ್ಷಗಳ ಹಿಂದಿನ ಪೈಪ್‌ಲೈನ್, ಬೋರ್‌ವೆಲ್‌ಗಳನ್ನು ದುರಸ್ಥಿ ಮಾಡದೇ ಇರುವುದು, ವಿದ್ಯುತ್ ದೀಪ ಇದ್ದರೂ ಇಲ್ಲದಂತಿರುವುದು, ಯಾವುದೇ ಗ್ರಾಮೀಣ ಪ್ರದೇಶದ ರಸ್ತೆಗಳಿಗೆ ವಿದ್ಯುತ್ ದೀಪ ವಿಸ್ತರಿಸದೇ ಇರುವುದು. ಕೋಡಿಂಬಾಳ ಗ್ರಾಮದ ಗುರಿಯಡ್ಕ, ಎಳಿಯೂರು, ದೊಡ್ಡಕೊಪ್ಪ, ಅಡ್ಡಗದ್ದೆ, ಪಾಲೋಳಿ, ಪಿಜಕ್ಕಳ, ಕಳಾರ, ಪಣೆಮಜಲು ಕಡಬದಿಂದ ದೂರವಿರುವ ಹಳ್ಳಿಗೂ ಅಲ್ಲಿಯ ಭೂಮಿಯನ್ನು ಮಾರಾಟ ಮಾಡುವ ಸಂದರ್ಭ ಸಬ್ ರಿಜಿಸ್ಟಾರ್ ಕಚೇರಿಯಲ್ಲಿ ಒಂದೇ ದರ ನಿಗದಿ ಪಡಿಸಿರುತ್ತಾರೆ. ಪಟ್ಟಣ ಪಂ. ಗಡಿ ಗುರುತು ಮಾಡದೇ ಇರುವುದರಿಂದ ಈ ಸಮಸ್ಯೆ ಉಂಟಾಗಿರುತ್ತದೆ. ಕಾನೂನಿನಲ್ಲಿ ಅವಕಾಶವಿದ್ದರೂ ಪಟ್ಟಣ ಪಂ. ಗಮನ ಹರಿಸದೇ ಇರುವುದು. ಕಡಬ ಪೇಟೆಯಲ್ಲಿ ರಿಕ್ಷಾ, , ಕಾರು, ಪಿಕಪ್-ಗೂಡ್ಸ್ ಬಸ್ಸುಗಳಿಗೆ ನಿಲುಗಡೆ ವ್ಯವಸ್ಥೆಯಿಲ್ಲದೆ ಇರುವುದು, ಉದ್ಯೋಗ ಖಾತರಿ ಯೋನೆಯಲ್ಲಿ ಲಕ್ಷಾಂತರ ಮಂದಿಗೆ ಬೇರೆ ಬೇರೆ ಯೋಜನೆಯಲ್ಲಿ ಸಹಾಯ ಸಹಕಾರ ಇದ್ದರೂ ಕೂಡಾ ಕಡಬ ಪಟ್ಟಣ ಪಂ. ವ್ಯಾಪ್ತಿಯ ಈ ಸವಲತ್ತು ದೊರಕದೆ ವಂಚಿತರಾಗಿರುವುದು. ಕಡಬ ಪೇಟೆಯಲ್ಲಿ ಸಾರ್ವಜನಿಕ ಶೌಚಾಲಯಗಳು ಇದ್ದರೂ, ಕೂಡಾ ಶುಚಿತ್ವ ನೀರಿನ ಕೊರತೆ, ಇಲ್ಲದೆ ಕೊಳೆತು ನಾರುತ್ತಿರುವ ವಿಚಾರ ಎಲ್ಲರಿಗೂ ತಿಳಿದಿದ್ದರೂ ಕೂಡಾ ಈ ತನಕ ದುರಸ್ತಿಗೊಳಿಸದೇ ಇರುವುದು ಖಂಡನೀಯ ಎಂದರು


ಪ್ರತಿಭಟನೆಯಲ್ಲಿ ಹೋರಾಟ ಸಮಿತಿಯ ಪ್ರಮುಖರಾದ ಉದ್ಯಮಿ ತೋಮ್ಸನ್ ಕೆ.ಟಿ, ಚಂದ್ರಶೇಖರ ಗೌಡ ಕೋಡಿಬೈಲ್ ,ಶಿವರಾಮ್ ಗೌಡ ಕಲ್ಕಾಲ, ಆರೀಸ್ ಕಲಾರ,ರಮ್ಲಾ ಕಳಾರ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.