ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ ಆಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ವಿವೇಕಾನಂದರ ಜಯಂತಿಯನ್ನು ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಕರುಣಾಕರ ಸುವರ್ಣ, ಸಂಸ್ಥೆಯ ಸಂಚಾಲಕರಾದ ಶ್ರೀಯುತ ಯು. ಜಿ. ರಾಧ, ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹೆಚ್. ಕೆ. ಪ್ರಕಾಶ್, ಇಂದ್ರಪ್ರಸ್ಥ ವಿದ್ಯಾಲಯದ ಮುಖ್ಯ ಶಿಕ್ಷಕಿಯಾದ ವೀಣಾ ಆರ್ ಪ್ರಸಾದ್ ಸ್ವಾಮಿ ವಿವೇಕಾನಂದರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಅರ್ಪಿಸಿದರು.

ಇದೇ ಸಂದರ್ಭದಲ್ಲಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಆಜಾದಿ ಕಿ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಅಡಿಯಲ್ಲಿ ರಚಿಸಿದ Unsung Heroes of Freedom Struggle ವೆಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ವಿದ್ಯಾರ್ಥಿನಿಯಾದ ರುಚಿಕ ೮ನೇ ತರಗತಿ ಸ್ವಾಮಿ ವಿವೇಕಾನಂದರ ತತ್ವ ವಿಚಾರಧಾರೆಗಳ ಬಗ್ಗೆ ಮಾತನಾಡಿದರು. ಸಂಸ್ಥೆಯ ಸಂಚಾಲಕರಾದ ಶ್ರೀಯುತ ಯು. ಜಿ. ರಾಧ ರವರು ಮಾತನಾಡಿ ಯುವ ಜನತೆ ದೇಶದ ಶಕ್ತಿ, ಸ್ವಾಮಿ ವಿವೇಕಾನಂದರ ಆದರ್ಶ ತತ್ವಗಳನ್ನು ಮೈಗೂಡಿಸಿಗೊಳ್ಳಿ ಎಂದು ಹೇಳಿದರು. ಕಾರ್ಯಕ್ರಮವನ್ನು ೮ನೇ ತರಗತಿಯ ವಿದ್ಯಾರ್ಥಿಗಳಾದ ಬಾಮತಿ ಉಪದ್ಯಾಯ ನಿರೂಪಣೆ ಮಾಡಿ, ಹೃತ್ವಿಕ್ ರೈ ಸ್ವಾಗತಿಸಿ, ಅನಘ ಎಮ್ ಧನ್ಯವಾದ ಸಮರ್ಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.