ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯ ಸಂಭ್ರಮ

0

 

ಗೂನಡ್ಕ ಸವೇರಪುರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೆ.3 ರಂದು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಸವೇರಪುರ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಂಚಾಲಕರಾದ ವಂದನೀಯ ಫಾ. ಪಾವ್ಲ್ ಕ್ರಾಸ್ತ ವಹಿಸಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವನಿತಾ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು, ಶಿಕ್ಷಕಿ ರೂಪಾರವರ ಮಾರ್ಗದರ್ಶನದಲ್ಲಿ ಹಾಗೂ ವಿದ್ಯಾರ್ಥಿ ನಾಯಕ ಅಶ್ವಿನ್ ರವರ ನಾಯಕತ್ವದಲ್ಲಿ ಶಾಲಾ ಮಕ್ಕಳು ಶಿಕ್ಷಕರಿಗೆಂದೇ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ಭಾಗವಹಿಸಿ ಆನಂದಿಸಿದರು.

ವಿದ್ಯಾರ್ಥಿನಿ ಶಿಮ್ರಾರವರು ಶಿಕ್ಷಕರ ದಿನಾಚರಣೆಯ ಬಗ್ಗೆ ತಿಳಿಸಿ ಕೊಟ್ಟರು. ಒಟ್ಟಾರೆಯಾಗಿ ಈ ದಿನ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಮೇಲಿನ ಅಭಿಮಾನವನ್ನು ಈ ಕಾರ್ಯಕ್ರಮದ ಮೂಲಕ ವ್ಯಕ್ತಪಡಿಸಿದರು.ವಿಧ್ಯಾರ್ಥಿನಿ ಹರ್ಷಿತಾ ಸ್ವಾಗತಿಸಿ ವಿಧ್ಯಾರ್ಥಿನಿ ಲಿಬಿನ್ ವಂದಿಸಿದರು.ವಿಧ್ಯಾರ್ಥಿನಿ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here