ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ವಿವೇಕ ಸಪ್ತಾಹ -2022″ಕ್ಕೆ ಚಾಲನೆ

ಯುವಜನರಿಗೆ ಸ್ಫೂರ್ತಿಯ ಸೆಳೆ ಸ್ವಾಮಿ ವಿವೇಕಾನಂದರು: ರಘುನಾಥ್ ರೈ ನುಳಿಯಾಲು

ಯುವಜನರಿಗೆ ಸ್ವಾಮಿ ವಿವೇಕಾನಂದರು ಆದರ್ಶ. ಆದ್ದರಿಂದ ಯುವ ಜನರು ಸ್ವಾಮಿ ವಿವೇಕಾನಂದರ ಸಂದೇಶಗಳನ್ನು ತಿಳಿದು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸುವಂತಾಗಬೇಕು ಎಂದು ನಿವೃತ್ತ ಶಿಕ್ಷಕ ರಘುನಾಥ್ ರೈ ನುಳಿಯಾಲು ಅವರು ಹೇಳಿದ್ದಾರೆ.

ನಗರದ ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ “ವಿವೇಕ ಸಪ್ತಾಹ -2022″ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಅಪಾರ ರಾಷ್ಟ್ರಪ್ರೇಮ, ವಿಶ್ವ ಭ್ರಾತೃತ್ವ ಹೊಂದಿದ್ದರು. ವಿವೇಕಾನಂದರು ಅಮೇರಿಕಾದ ಚಿಕಾಗೋದಲ್ಲಿ ಮಾಡಿದ ಭಾಷಣ ರಾಷ್ಟ್ರದ ಸಂಸ್ಕøತಿಯನ್ನು ಎತ್ತಿ ಹಿಡಿದಿತ್ತು. ಇದರಿಂದಾಗಿ ಭಾರತ ದೇಶದ ಶ್ರೀಮಂತ ಸಂಸ್ಕøತಿ, ಪರಂಪರೆ, ಆಚಾರ ವಿಚಾರಗಳು ಇಡೀ ವಿಶ್ವಕ್ಕೆ ತಿಳಿಯುವಂತಾಯಿತು. ರವೀಂದ್ರನಾಥ ಠಾಕೂರ್ ಅವರು ವಿದೇಶಿ ಸಾಹಿತಿ ರೋಮೈನ್ ರಾಲ್ಡ್ ಅವರಿಗೆ ತಿಳಿಸಿದಂತೆ ಭಾರತವನ್ನು ಅಧ್ಯಯನ ಮಾಡ ಬೇಕೆಂದರೆ, ದೇಶ ಸುತ್ತುವ ಅಗತ್ಯವಿಲ್ಲ. ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಅಧ್ಯಯನ ಮಾಡಿ ದರೆ ಸಾಕು ಎಂದಿದ್ದಾರೆ. ಅಂತಹ ಮಹಾನ್ ಚೇತನ ಶಕ್ತಿ ಸ್ವಾಮಿ ವಿವೇಕಾನಂದರು ಎಂದು ಹೇಳಿದರು.

ಇದೇ ವೇಳೆ ರಾಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ‘ಸ್ವಾಮಿ ವಿವೇಕಾನಂದ’ ಎಂಬ ವಿಶೇಷ ಭಿತ್ತಿಪತ್ರಿಕೆಯನ್ನು ಉದ್ಘಾಟಕರು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕ ಡಾ. ಬಿ.ಕೆ ರವೀಂದ್ರ ರವರು, ‘ಯುವ ಸಬಲೀಕರಣ’ದ ಕುರಿತು ಮಾತನಾಡಿ, ಸ್ವಾಮಿ ವಿವೇಕಾನಂದರು ‘ಏಳಿ, ಎದ್ದೇಳಿ, ಗುರಿ ತಲುಪುವ ತನಕ ನಿಲ್ಲದಿರಿ’ ಎಂಬ ಮಾತಿನ ಸಾರವನ್ನು ಅರಿತುಕೊಳ್ಳಿ. ಯುವ ಜನರು ತಮ್ಮ ಜೀವನದ ಗುರಿ ತಲುಪುವವರೆಗೂ ಸತತ ಪ್ರಯತ್ನ ಮತ್ತು ಪರಿಶ್ರಮ ಇರಬೇಕು ಎಂದರು. ಯುವ ಜನರು ಬದುಕಿನಲ್ಲಿ ಸಮಯಕ್ಕೆ ಹೆಚ್ಚಿನ ಮಹತ್ವ ನೀಡಿ, ಸಮಯ ಮತ್ತು ಸಮುದ್ರದ ಅಲೆ ಎಂದೂ ಯಾರಿಗೂ ಕಾಯುವುದಿಲ್ಲ. ಸಮ ಯದ ಮೌಲ್ಯವನ್ನು ಅರಿತು ಜೀವನದಲ್ಲಿ ಮುಂದೆ ಸಾಗಬೇಕು ಎಂದು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ಕಾನೂನು ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿ ಶ್ರೀಮತಿ ಪ್ರಮೀತಾ ಸಿ ಹಾಸ್ ಮಾತನಾಡಿ, ಸ್ವಾಮಿ ವಿವೇಕಾನಂದರ ಸಂದೇಶಗಳು ಸಾರ್ವಕಾಲಿಕವಾಗಿದ್ದು, ಸ್ವಾಮಿ ವಿವೇಕಾನಂದರ ಚಿಂತನೆಗಳನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು. ಶಿಕ್ಷಕರು ತರಗತಿಗಳಲ್ಲಿ ಹಲವು ಉಪಯುಕ್ತ ಮಾಹಿತಿ ನೀಡಿ, ಯುವ ಜನರನ್ನು ಸತ್ಪ್ರಜೆಯ ಮೂರ್ತಿಗಳನ್ನಾಗಿ ನಿರ್ಮಿಸುತ್ತಾರೆ. ಆದರೆ ವಿವೇಕಾನಂದರು ನಿಮಗೆ ನೀವೆ ಶಿಲ್ಪಿಗಳು ಎಂದಿದ್ದಾರೆ. ಈ ನಿಟ್ಟಿನಲ್ಲಿ ಯುವ ಜನರು ಭವಿಷ್ಯವನ್ನು ಉಜ್ವಲವಾಗಿ ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿವೇಕಾನಂದ ಕಾನೂನು ಮಹಾವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯೋಜಕ ಲಕ್ಷ್ಮೀಕಾಂತ ರೈ ಅನಿಕೂಟೆಲ್ ಪ್ರಾಸ್ತವಿಕವಾಗಿ ಮಾತನಾಡಿ, ಸ್ವಾಮಿ ವಿವೇಕಾನಂದ ಜನ್ಮದಿನಾಚರಣೆ ಮತ್ತು ರಾಷ್ಟ್ರೀಯ ಯುವದಿನದ ಹಿನ್ನಲೆ ಹಾಗೂ ಅಗತ್ಯತೆ ಕುರಿತು ಹೇಳಿದರು.

ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ ಪಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ಸುರೇಶ್ ರೈ ಪಡ್ಡಾಂಬೈಲು, ಕಾನೂನು ಉಪನ್ಯಾಸಕರಾದ ಕು. ಶ್ರೀರಕ್ಷಾ, ಕು.ಶೀತಲ್, ಸಮಾಜಶಾಸ್ತ್ರ ಉಪನ್ಯಾಸಕಿ ಕು.ಹರಿಣಾಕ್ಷಿ, ಅರ್ಥಶಾಸ್ತ್ರ ಉಪನ್ಯಾಸಕ ಶ್ರೀಕೃಷ್ಣ ಭಟ್ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ಕುಮಾರ್ ಎಂ ಕೆ, ಕಂಪ್ಯೂಟರ್ ಉಪನ್ಯಾಸಕ ತಿಲಕ್ ಸಹಕರಿಸಿದರು. ತೃತೀಯ ಎಲ್.ಎಲ್.ಬಿ.ಯ ಅಭಿಷೇಕ್ ಸ್ವಾಗತಿಸಿ, ನಿಶಾನ್ ವಂದಿಸಿದರು. ಕಾರ್ಯಕ್ರಮವನ್ನು ತೃತೀಯ ಎಲ್.ಎಲ್.ಬಿ.ಯ ಯಶಸ್ವಿನಿ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.