ಜ.14: ಮಜ್ಜಾರಡ್ಕ ಶ್ರೀ ವಿಷ್ಣು ಯುವ ಶಕ್ತಿ ಬಳಗದ ವತಿಯಿಂದ  ಕೊಂಬೆಟ್ಟು ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
ಪುತ್ತೂರು: ಭಾರತ‌ ಸರ್ಕಾರ ಯುವ ಕಾರ್ಯ‌ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ‌ಮಂಗಳೂರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವ ಜನ ಒಕ್ಕೂಟ  ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಶ್ರೀ ವಿಷ್ಣು ಯುವ ಶಕ್ತಿ ಬಳಗ  ಮಜ್ಜಾರಡ್ಕ ಇದರ ವತಿಯಿಂದ ತಾಲೂಕು ಮಟ್ಟದ ಕ್ರೀಡಾ ಕೂಟವು ಜ. 14 ರಂದು ತಾಲೂಕು ಕೊಂಬೆಟ್ಟು ಕ್ರೀಡಾಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದ  ಉಧ್ಘಾಟನೆಯನ್ನು ನಗರಸಭೆ ಅಧ್ಯಕ್ಷ ಜೀವಂದರ್ ಜೈನ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ವಿಷ್ಣು ಬಳಗ ಮಜ್ಜಾರಡ್ಕ ಇದರ ಉಪಾಧ್ಯಕ್ಷ ರಘನಾಥ ಪೂಜಾರಿ,ಅತಿಥಿಗಳಾಗಿ,ನಗರಸಭಾ ಸದಸ್ಯ ಜಗನ್ನೀವಾಸ್ ರಾವ್,ತಾಲೂಕು ಪಂಚಾಯತ್ ಪುತ್ತೂರು ಇದರ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ, ಪುತ್ತೂರು ಸಂಚಾರ ಪೋಲಿಸ್ ಠಾಣೆಯ ಉಪನಿರೀಕ್ಷಕರು ಜಿ .ರಾಮನಾಯ್ಕ್, ನೆಹರು ಯುವ ಕೇಂದ್ರ ಮಂಗಳೂರು ಇದರ ಜಿಲ್ಲಾ ಯುವ ಅಧಿಕಾರಿ ರಘವೀರ್ ಸೂಟರ್ ಪೇಟೆ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ ಇದರ ಮೇಲ್ವಿಚಾರಕರಾಗಿರುವ ಶ್ರೀಕಾಂತ್ ಪೂಜಾರಿ ಬಿರಾವು,ಜಿಲ್ಲಾ ಯುವ ಜನ ಒಕ್ಕೂಟ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ತಾಲೂಕು ಯುವ ಜನ ಒಕ್ಕೂಟ ಅಧ್ಯಕ್ಷ ದಿನೇಶ್ ಸಾಲ್ಯಾನ್ ಭಾಗವಹಿಸಲಿದ್ದಾರೆ.
ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷರಾಗಿ ಶ್ರೀ ವಿಷ್ಣು ಯುವ ಶಕ್ತಿ ಬಳಗ ಮಜ್ಜಾರಡ್ಕ ಇದರ ಅಧ್ಯಕ್ಷ ಉದಯ್ ಸ್ವಾಮಿನಗರ,ಅತಿಥಿಗಳಾಗಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿ‌ ಇದರ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ  ಸುಂದರ ಗೌಡ, ಪದ್ಮಶ್ರೀ ಸೋಲಾರ್ ಸಿಸ್ಟಮ್ ಇದರ ಸೀತರಾಮ್ ರೈ ಕೆದಂಬಾಡಿ ಗುತ್ತು, ಅರಣ್ಯ ಗ್ರಾಮ ಸಮಿತಿ ಅರಿಯಡ್ಕ ಇದರ ಅಧ್ಯಕ್ಷ ಲೋಕೇಶ್ ರೈ ಅಮೈ, ತಾಲೂಕು ಯುವ ಜನ ಒಕ್ಕೂಟ ಗೌರವಾಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ಮೋಹನ್ ದಾಸ್ ರೈ ಮಾತೃ ಶ್ರೀ ಅರ್ಥ್ ಮೂವರ್ಸ್ ಕುಂಬ್ರ, ಹಾಗೂ ಶ್ರೀ ವಿಷ್ಣು ಯುವ ಶಕ್ತಿ ಬಳಗ  ಮಜ್ಜಾರಡ್ಕ ಇದರ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆ ಮಯೂರ ಭಾಗಿಯಾಗಲಿದ್ದಾರೆ.
ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪುರುಷರಿಗೆ ವಾಲಿಬಾಲ್ ಮತ್ತು ಹಗ್ಗಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್ ಮತ್ತು ಹಗ್ಗಜಗ್ಗಾಟ ಹಾಗೂ ಗುಂಡೆಸತ,ಉದ್ದಜಿಗಿತ, ಓಟ ಇನ್ನಿತರ ಸ್ಪರ್ಧೆಗಳು ನಡೆಯಲಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಯುವಕ ಯುವತಿಯರಿಗೆ ಮುಕ್ತ ಅವಕಾಶವಿದ್ದು,ಜ.14  ರೈ ಬೆಳಗ್ಗೆ 9:00 ಮುಂಚಿತವಾಗಿ ಹೆಸರು ನೋಂದಾಯಿಸಲು ಅವಕಾಶವಿದೆ ಎಂದು ನೆಹರು ಯುವ ಕೇಂದ್ರ ಮಂಗಳೂರು ಇದರ ತಾಲೂಕು ಸಂಯೋಜಕರಾದ ಗೌತಮ್ ರಾಜ್ ಕರಂಬಾರು, ಪ್ರಜ್ಞಾ ಕುಲಾಲ್ ಕಾವು ಹಾಗೂ ಸಂಘಟನಾ ಕಾರ್ಯದರ್ಶಿ ರಾಜೇಶ್ ಕೆ ಮಯೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ‌.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.